

ಕೆ.ಆರ್.ಪೇಟೆ: ವೈಜ್ಞಾನಿಕ ಪದ್ಧತಿಯಲ್ಲಿ ಬೇಸಾಯ ಮಾಡಿ ಕೃಷಿಯನ್ನು ಲಾಭದಾಯಕ ಉದ್ಯಮವಾಗಿ ಮಾಡಿಕೊಳ್ಳಲು ಶಾಸಕ ಎಚ್.ಟಿ.ಮಂಜು ಸಲಹೆ ನೀಡಿದರು.
ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ರೈತರಿಗೆ ಬಿತ್ತನೆ ಬೀಜ ಹಾಗೂ ರಸ ಗೊಬ್ಬರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಭತ್ತ, ರಾಗಿ, ಜೋಳ, ಅಲಸಂದೆ ಹಾಗೂ ಕೃಷಿ ಪರಿಕರಗಳನ್ನು ವಿತರಿಸಿ ಕೃಷಿ ಅಧಿಕಾರಿಗಳ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನ ಪಡೆದು ವಿಜ್ಞಾನಿಕ ಪದ್ಧತಿಯಲ್ಲಿ ರೈತರು ಬೇಸಾಯ ಮಾಡಬೇಕು ಎಂದು ಹೇಳಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ್ ಕುಮಾರ್, ಕೃಷಿ ತಾಂತ್ರಿಕ ಅಧಿಕಾರಿ ಶ್ರೀಧರ್ ಇತರರು ಇದ್ದರು.