ರೈತರು ಬೆಳೆಗಳ ಸಮಸ್ಯೆ ಪರಿಹರಿಸಿಕೊಳ್ಳಲಿ

Let farmers solve crop problems
ತಿಡಗುಂದಿ ಪಟ್ಟಣದಲ್ಲಿ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಸಂಗನಸಬಸವ ಗೊಳ್ಳಗಿ, ಎಸ್.ಕೆ. ಬಿರಾದಾರ, ಡಾ. ಸಿದ್ದಣ್ಣ ಠೋಕೆ ಮತ್ತಿತರರಿದ್ದಾರೆ.
Published on

ವಿಜಯಪುರ: ರೈತರು ತಮ್ಮ ಬೆಳೆಗಳ ಕುರಿತು ಯಾವುದೇ ಸಮಸ್ಯೆಗಳಿದ್ದರೆ ಇಲ್ಲಿನ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರಕ್ಕೆ ಭೇಟಿ ನೀಡಿ ಸಂಬಂಧಪಟ್ಟವರ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕೆಂದು ಕೇಂದ್ರ ಮುಖ್ಯಸ್ಥ ಸಂಗನಬಸವ ಗೊಳ್ಳಗಿ ಹೇಳಿದರು.

ತಾಲೂಕಿನ ತಿಡಗುಂದಿ ಗ್ರಾಮದಲ್ಲಿನ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದಲ್ಲಿ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಹಾಗೂ ಆತ್ಮ ಯೋಜನೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಲಿಂಬೆ ಮತ್ತು ಸೀತಾಫಲ ಬೆಳೆಯಲ್ಲಿ ನೂತನ ಬೇಸಾಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೈತರು ಕೇಂದ್ರ ಭೇಟಿ ನೀಡುವ ಮೂಲಕ ಇಲ್ಲಿನ ಸೌಲಭ್ಯ ಮತ್ತು ಸೂಕ್ತ ಮಾಹಿತಿ ಪಡೆದು ತಮ್ಮ ಕ್ಷೇತ್ರದಲ್ಲಿ ಉತ್ತಮ ಬೆಳೆ ಬೆಳೆಯಬೇಕು. ನಿಮ್ಮ ಗ್ರಾಮಗಳಲ್ಲಿ 20 ರಿಂದ 30 ರೈತರು ಸೇರಿ ನಿಮ್ಮ ಯಾವುದೇ ಸಮಸ್ಯೆಗಳ ಕುರಿತು ಮಾಹಿತಿ ಕೇಳಿದರೆ ನಮ್ಮ ತಂಡದವರು ಸ್ಥಳಕ್ಕೆ ಆಗಮಿಸಿ ಬಂದು ಸಮಸ್ಯೆಗಳಿಗೆ ಪರಿಹಾರ ಮತ್ತು ತರಬೇತಿ ನೀಡುತ್ತಾರೆ ಎಂದರು.

ಆತ್ಮ ಉಪ ಯೋಜನಾ ನಿರ್ದೇಶಕ ಎಸ್.ಕೆ. ಬಿರಾದಾರ ಮಾತನಾಡಿ, ಆತ್ಮ ಯೋಜನೆಯಲ್ಲಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಸಹಾಯಕ ಪ್ರಾಧ್ಯಾಪಕ ಡಾ. ಸಿದ್ದಣ್ಣ ಠೋಕೆ, ರಮೇಶ ರಾಠೋಡ, ಎಂ.ಎ. ವಾಸೀಮ್ ವಿವಿಧ ಬೇಸಾಯಗಳ ಕುರಿತು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net