ಸರ್ಕಾರಿ ಶಾಲಾ ಮಕ್ಕಳ ಪ್ರಗತಿಗೆ ಸಹಕಾರಿಯಾಗಲಿ

6-pnp 4
ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಗತಿ ಸೇವಾ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
Published on

ಪಾಂಡವಪುರ: ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಂಘ-ಸಂಸ್ಥೆಗಳ ಸಹಕಾರಿಯಾಗಬೇಕು ಎಂದು ಪ್ರಗತಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಡಾ.ನಾಗೇಶ್ ರಾಗಿಮುದ್ದನಹಳ್ಳಿ ಹೇಳಿದರು.

ತಾಲೂಕಿನ ರಾಗಿಮುದ್ದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಗತಿ ಸೇವಾ ಟ್ರಸ್ಟ್ ವತಿಯಿಂದ ಗುರುವಾರ ಆಯೋಜಿಸಿದ್ದ 2023-24 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿದ ಬಳಿಕ ಮಾತನಾಡಿದರು.

ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಗತಿ ಸೇವಾ ಟ್ರಸ್ಟ್ ಪ್ರತಿ ವರ್ಷವೂ ಪ್ರತಿಭಾ ಪುರಸ್ಕಾರ ನೀಡುವ ಕಲಸ ಮಾಡಿಕೊಂಡು ಬಂದಿದೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಉತ್ತಮ ಸ್ಥಾನಕ್ಕೇರಬೇಕು ನಮ್ಮ ಆಶಯವಾಗಿದೆ. ಪ್ರಗತಿ ಟ್ರಸ್ಟ್ ಆರೋಗ್ಯ, ಶಿಕ್ಷಣ ಮತ್ತು ಪರಿಸರಕ್ಕೆ ಹೆಚ್ಚು ಆದ್ಯತೆ ನೀಡುತ್ತಿದೆ. ಹದಿನಾರು ವರ್ಷಗಳಿಂದ ತಾಲೂಕು ಮಟ್ಟದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿದ್ದೇವೆ ಎಂದರು.

ಡಾ.ಬಿ.ಸಿ.ವಿಜಯಕುಮಾರ್ ಬಲ್ಲೇನಹಳ್ಳಿ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಧ್ಯಯನದ ಮೂಲಕ ಸಾಧನೆ ಮಾಡಬೇಕು. ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಸಾಧ್ಯವಾದಷ್ಟು ದೂರವಿರಿ. ಆಧುನಿಕ ಆಕರ್ಷಣೆಗೆ ಒಳಗಾಗದೆ ಶ್ರದ್ಧೆ ಮತ್ತು ಆಸಕ್ತಿಯಿಂದ ವ್ಯಾಸಂಗ ಮಾಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ವೇಳೆ ವಿದ್ಯಾರ್ಥಿಗಳಾದ ಪ್ರವೀಣ್, ಅನಿತಾ, ಸುನೀತ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ನಿರ್ಮಲಾ, ಗುಮ್ಮನಹಳ್ಳಿ ಗ್ರಾಪಂ ಅಧ್ಯಕ್ಷ ರಘು, ಸದಸ್ಯ ಚಂದ್ರು, ಶ್ಯಾಮ್, ರವಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net