ವೀರತನವನ್ನು ಮೈಗೂಡಿಸಿಕೊಳ್ಳಲಿ

11 manvi 03
ಮಾನ್ವಿ ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಹಮ್ಮಿಕೊಂಡ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ತಾಜು ಪಿರಂಗಿ ಅವರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಉಪತಹಸೀಲ್ದಾರ್ ವಾಸವಿ.ಡಿ, ಪುರಸಭೆ ವ್ಯವಸ್ಥಾಪಕ ನರಸಿಂಹಲು, ಶಿರಸ್ತೇದಾರ್ ವಿನಾಯಕ ರಾವ್, ಅಗ್ನಿಶಾಮಕ ಇಲಾಖೆ ಹಾಜಮೀಯ,
Published on

ಮಾನ್ವಿ: ಚಿತ್ರದುರ್ಗದ ಕೋಟೆ ರಕ್ಷಣೆಗೆ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ವೀರರಾಣಿ ಒನಕೆ ಓಬವ್ವ ಸಮಯ ಪ್ರಜ್ಞೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ರಾಜು ಪಿರಂಗಿ ಹೇಳಿದರು.

ಪಟ್ಟಣದ ತಹಸೀಲ್ ಕಚೇರಿಯಲ್ಲಿ ಸೋಮವಾರ ತಾಲೂಕು ಆಡಳಿತದಿಂದ ಹಮ್ಮಿಕೊಂಡ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಒನಕೆ ಓಬವ್ವ ಹೆಸರನ್ನು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದು. ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚನ್ನಮ್ಮ, ರಾಣಿ ಅಬ್ಬಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ ಎಂದರು.

ಆಧುನಿಕ ದಿನಮಾನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿಯೂ ಮುಂದುವರೆಯುತ್ತಿರುವುದು ಅತ್ಯಂತ ಸಂತಸದ ಸಂಗತಿ. ಮಹಿಳೆಯರು ಯಾವುದಕ್ಕೂ ಹೆದರದೆ ಜೀವನದಲ್ಲಿ ಧೈರ್ಯವಂತನಾಗಬೇಕು. ವೀರರಾಣಿ ಓಬವ್ವ ಅವರಂತೆ ವೀರತನವನ್ನು ಮೈಗೂಡಿಸಿಕೊಳ್ಳಬೇಕು. ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಪ್ರಮುಖರಾದ ಸಂಗಣ್ಣ, ಶಾಹೀದ್, ಶಿವಲೀಲಾ, ಶ್ರೀಧರ ತಳವಾರ, ಮಂಜುನಾಥ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net