ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ

Screenshot_2024-08-06-23-41-03-17.jpg
Published on

ಬೆಳಗಾವಿ: ದಲಿತರ ಹೆಸರು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು, ದಲಿತರ ಹಣವನ್ನು ಲೂಟಿ ಮಾಡಿದ್ದಾರೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸಿದ್ದರಾಮಯ್ಯ ಅವರ ಹಗರಣಗಳ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದೇವೆ. ಸಿಬಿಐ ತನಿಖೆ ಜಾರಿಯಲ್ಲಿದೆ. ಆದರೆ, ಕಾಂಗ್ರೆಸ್ಸಿಗರು ಅದಕ್ಕೆ ಬೇರೆ ಬೇರೆ ಬಣ್ಣ ನೀಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜೀನಾಮೆ ಕೇಳಿದರೆ ಕಾಂಗ್ರೆಸ್ಸಿಗರು ಪಶ್ಚಿಮ ಬಂಗಾಳದ ಮಾದರಿಯಲ್ಲಿ ಪ್ರತಿಭಟಿಸುವುದಾಗಿ ಹೇಳಿಕೆ ನೀಡಿರುವುದು ನಾಚಿಕೆಗೇಡಿನ ಸಂಗತಿ. ಕೂಡಲೇ ಕಾಂಗ್ರೆಸ್ ನಾಯಕರು ಈ ಬಗ್ಗೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net