ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು ಮಾಡಲಿ

20 vikram 7 (P H Neeralakeri)
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಅನಿವಾರ್ಯ ಎಂದು ರಾಜ್ಯಪಾಲರು ನಿರ್ಣಯ ತೆಗೆದುಕೊಂಡು ಶಿಫಾರಸು ಮಾಡುವ ಅವಶ್ಯಕತೆ ಇದೆ ಎಂದು ಬಿಜೆಪಿ ಮುಖಂಡ ಪಿ.ಎಚ್​. ನೀರಲಕೇರಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸಿ ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ನ್ಯಾಯಾಲಯ ಆದೇಶ ನೀಡಿದ 48 ಗಂಟೆಯಾಗಿದ್ದರೂ ಎಫ್​ಐಆರ್​ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ರಾಜೀನಾಮೆ ಕೊಡದೆ ನಿಷ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಜನಸಾಮಾನ್ಯನಿಗೆ ಒಂದು ನ್ಯಾಯ. ಅಧಿಕಾರದಲ್ಲಿ ಇರುವವರಿಗೆ ಮತ್ತೊಂದು ನ್ಯಾಯ ಎನ್ನುವಂತೆ ಆಗಿದೆ. ಬೇಕಾದ ಕಡತಗಳನ್ನು ತುರ್ತು ವಿಲೇವಾರಿ ಮಾಡುತ್ತಾರೆ. ಬೇಡವಾದದ್ದನ್ನು ಮೂಲೆಗೆ ತಳ್ಳುತ್ತಾರೆ. ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ನಿಂತಿದೆ. ಹೀಗಾಗಿ ರಾಷ್ಟ್ರಪತಿ ಆಡಳಿತ ಅನಿವಾರ್ಯ ಎಂದು ರಾಜ್ಯಪಾಲರು ಸೂಕ್ತ ನಿರ್ಣಯ ತೆಗೆದುಕೊಂಡು ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net