ಕನ್ನಡದ ಕಂಪು ಮನೆ ಮನೆಗಳಲ್ಲಿ ಪಸರಿಸಲಿ

6 nrp 3.
ಎನ್.ಆರ್.ಪುರದಲ್ಲಿ ಏರ್ಪಡಿಸಿದ್ದ ಕಸಾಪ ಸಂಸ್ಥಾಪನಾ ದಿನಾಚರಣೆಯನ್ನು ಡಾ.ಈಶ್ವರನಾಯ್ಕ ಉದ್ಘಾಟಿಸಿದರು. ಪೂರ್ಣೇಶ್, ಭಾಗ್ಯಾ, ಜಯಮ್ಮ, ಎಂ.ಪಿ.ಮನು ಇತರರಿದ್ದರು.
Published on

ಎನ್.ಆರ್.ಪುರ: ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ಕನ್ನಡ ಭಾಷೆ ಮನೆ ಮನೆಗಳಲ್ಲಿ, ಮನ ಮನಗಳಲ್ಲಿ ಪಸರಿಸಬೇಕೆಂದು ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಈಶ್ವರನಾಯ್ಕ ಹೇಳಿದರು.
ಪಟ್ಟಣದಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಸಂತೋಷವನ್ನುಂಟು ಮಾಡುವ ಭಾಷೆ. ಅದು ನಮ್ಮ ಜೀವನದ ಭಾಷೆ, ನಮ್ಮ ಬದುಕಿನ ಭಾಷೆಯಾಗಿದೆ. ಕನ್ನಡವನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ 1915ರ ಮೇ 5ರಂದು ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಲಾಯಿತು. ಅದಕ್ಕಾಗಿ ಇಂದು ಸಂಸ್ಥಾಪನಾ ದಿನಾಚರಣೆ ಆಚರಿಸಲಾಗುತ್ತಿದೆ. ಕನ್ನಡ ಭಾಷೆಯನ್ನು ಬಳಸುವುದರ ಮೂಲಕ ಕನ್ನಡವನ್ನು ಉಳಿಸಬಹುದು. ಕನ್ನಡ ನಮ್ಮ ಮಾತೃ ಭಾಷೆ. ಕನ್ನಡದ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ ಕಾರ್ಯನಿರ್ವಹಿಸುತ್ತಾ ಬಂದಿದೆ ಎಂದರು.
ಜಿಲ್ಲಾ ಕಸಾಪ ಸಂಚಾಲಕ ಎಸ್.ಎಸ್.ಸಂತೋಷ್‌ಕುಮಾರ್ ಮಾತನಾಡಿ, ಕೇವಲ ಅದ್ದೂರಿ, ಆಡಂಬರದ ಕಾರ್ಯಕ್ರಮಗಳಿಂದ ಕನ್ನಡವನ್ನು ಉಳಿಸಲು ಸಾಧ್ಯವಿಲ್ಲ. ಪ್ರತಿ ಮನೆ ಮನೆಗಳಲ್ಲೂ ಕನ್ನಡ ಕಾರ್ಯಕ್ರಮಗಳಾಗಬೇಕು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಕನ್ನಡ ಮತ್ತು ಸಂವಿಧಾನದ ಆಶಯಗಳನ್ನು ಈಡೇರಿಸಲಾಗಿದೆ ಎಂದು ಹೇಳಿದರು.
ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಾ ನಂಜುಂಡಸ್ವಾಮಿ, ನಗರ ಘಟಕದ ಅಧ್ಯಕ್ಷ ಪ್ರಶಾಂತ್ ಎಲ್.ಶೆಟ್ಟಿ, ಕನ್ನಡಪರ ಹೋರಾಟಗಾರ ಪಿ.ಸಿ.ಮ್ಯಾಥ್ಯೂ, ಸಾಹಿತಿ ಜಯಮ್ಮ, ಜೇಸಿ ಸಂಸ್ಥೆ ಅಧ್ಯಕ್ಷ ಎಂ.ಪಿ.ಮನು, ಕಸಾಪ ಕಾರ್ಯದರ್ಶಿ ಮಂಜಪ್ಪ, ಆರ್.ನಾಗರಾಜ್, ಬಿ.ನಂಜುಂಡಪ್ಪ, ವಾಸಂತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net