ಎಲ್ಲೆಡೆಯೂ ಕನ್ನಡಿಗರಿಗೆ ಕೆಲಸ ದೊರಕಲಿ

08-GPT-2
Published on

ಗುಂಡ್ಲುಪೇಟೆ: ತಾಲೂಕಿನ ಎಲ್ಲ ಕಡೆಗಳಲ್ಲಿಯೂ ನೆರೆ ರಾಜ್ಯದವರನ್ನು ನೇಮಿಸಿಕೊಳ್ಳುವುದರಿಂದ ಸ್ಥಳೀಯರಿಗೆ ಉದ್ಯೋಗ ದೊರಕದ ಬಗ್ಗೆ ಆಕ್ರೋಶಗೊಂಡ ನಮ್ಮ ಕರ್ನಾಟಕ ಸೇನೆ ಸಂಘಟನೆಯವರು ಕನ್ನಡಿಗರಿಗೆ ಕೆಲಸ ಕೊಡುವಂತೆ ಮಾಡಬೇಕು ಎಂದು ಕಾರ್ಮಿಕ ಇಲಾಖೆಗೆ ಮನವಿ ಸಲ್ಲಿಸಿದರು.


ಸಂಘಟನೆಯ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ನೇತೃತ್ವದಲ್ಲಿ ತಾಲೂಕು ಕಚೇರಿಗೆ ತೆರಳಿದ ಪದಾಧಿಕಾರಿಗಳು ತಾಲೂಕಿನಲ್ಲಿ ಎಲ್ಲ ಕೆಲಸಗಳಿಗೂ ಉತ್ತರ ಭಾರತದ ಕಾರ್ಮಿಕರನ್ನೇ ಬಳಸಲಾಗುತ್ತಿದೆ. ಇದರಿಂದ ಅಕ್ರಮವಾಗಿ ಬಾಂಗ್ಲಾ ಹಾಗೂ ಹೊರ ರಾಜ್ಯದ ಕಾರ್ಮಿಕರನ್ನು ಕರೆತಂದು ಅಕ್ರಮವಾಗಿ ನೆಲೆಯೂರಿಸಲಾಗುತ್ತಿದೆ. ಆದ್ದರಿಂದ ಕಾರ್ಮಿಕ ಇಲಾಖೆಯು ಉದ್ಯೋಗಳಿಗೆ ಸ್ಥಳೀಯ ಕನ್ನಡಿಗರನ್ನೇ ಪರಿಗಣಿಸುವಂತೆ ಮಾಡಬೇಕು ಎಂದು ಕಾರ್ಮಿಕ ಇಲಾಖೆಯ ನಿರೀಕ್ಷಕ ನಾರಾಯಣಮೂರ್ತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.


ಮಹಮದ್ ಉಸ್ಮಾನ್, ಶ್ರೀನಿವಾಸನಾಯ್ಕ, ಜಗದೀಶ್, ಶಂಕರ, ಬಂಗಾರ, ಮಹೇಶ್, ನಾಗರಾಜು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net