ಕಕ ಭಾಗದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪಿಸಲಿ

ಮಾನ್ವಿಯ ವಾಲ್ಮೀಕಿ ವೃತ್ತದಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿಗಾಗಿ ಜಾಥಾ ನಡೆಯಿತು. ಪಕ್ಷದ ಜಿಲ್ಲಾಧ್ಯಕ್ಷ ಶೇಕ್ ಫರೀದ್ ಉಮರಿ, ರಾಜ್ಯ ಉಪಾಧ್ಯಕ್ಷ ಶ್ರೀಕಾಂತ್ ಸಾಲಿಯಾನ್, ಖಜಾಂಚಿ ಸಲೀಂ ಮಂಗಳೂರು, ವಲಯ ಕಾರ್ಯದರ್ಶಿ ಇರ್ಫಾನ್ ಬೀದರ್, ತಾಲೂಕು ಅಧ್ಯಕ್ಷ ಬಾಬಾ ಹುಸೇನ್ ಗಚ್ಚಿ ಇತರರಿದ್ದರು.

Published on

ಮಾನ್ವಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಬಿಡುಗಡೆಯಾದರೂ ಈ ಭಾಗದ ಜನರು ಗುಳೆ ಹೋಗುವುದು ತಪ್ಪಿಲ್ಲ. ಯುವಕರಿಗೆ ಅರ್ಹತೆಗೆ ತಕ್ಕಂತೆ ಉದ್ಯೋಗ ಸಿಗುತ್ತಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಅಧ್ಯಕ್ಷ ತಾಹಿರ್ ಹುಸೇನ್ ವಕೀಲ ಹೇಳಿದರು.

ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಕ ಭಾಗದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿಲ್ಲ. ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಬಾಣಂತಿಯರ ಸರಣಿ ಸಾವು ನಿಂತಿಲ್ಲ. ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದ ಅ.6ರಿಂದ 13ರವರೆಗೆ ಬಳ್ಳಾರಿಯಿಂದ ಬೀದರ್‌ವರೆಗೆ ಪಕ್ಷದಿಂದ ಜಾಥಾ ಆಯೋಜಿಸಲಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆದರೂ ಕಲ್ಯಾಣ ಕರ್ನಾಟಕ ಹಿಂದುಳಿದ ಪ್ರದೇಶವಾಗಿಯೇ ಉಳಿದಿದೆ. ಸಂವಿಧಾನದ 98ನೇ ತಿದ್ದುಪಡಿ ಮೂಲಕ 2013ರಲ್ಲಿ ಕಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿದರೂ ಅಭಿವೃದ್ಧಿ ಕಾಣುತ್ತಿಲ್ಲ ಎಂದರು.

ಈ ಭಾಗದಲ್ಲಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಬೇಕು. ಸ್ಥಳೀಯರಿಗೆ ಉದ್ಯೋಗ ನೀಡಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ನೀರಾವರಿ ಯೋಜನೆಗಳ ಶೀಘ್ರ ಆರಂಭ ಸೇರಿ ಇತರ ಬೇಡಿಕೆಗಳ ಈಡೆರಿಕೆಗೆ ಒತ್ತಾಯಿಸಿದರು.

ಪ್ರಮುಖರಾದ ನಾಸೀರ್ ಅಲಿ, ಎಂ.ಎ.ಎಚ್.ಮುಕೀಮ್, ಸೈಯದ್ ಅಕ್ಬರ್‌ಪಾಷಾ ಅಬ್ದುಲ್ ಕರೀಂಖಾನ್, ರವೀಂದ್ರ ಜಾನೇಕಲ್, ಮಾರೆಪ್ಪ ಹರವಿ, ಶರಣು ಮುದ್ದಂಗುದ್ದಿ, ಎಚ್.ಶರ್ಫುದ್ದೀನ್ ಪೋತ್ನಾಳ, ಸುಭಾನ್ ಬೇಗ್, ಹನುಮಂತ ಕೋಟೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net