ಉಪನ್ಯಾಸಕರು ಹೊಸತನಕ್ಕೆ ತೆರೆದುಕೊಳ್ಳಲಿ

gan (6)
Published on

ಕುಂದಾಪುರ: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಮಹತ್ವದ ಜವಾಬ್ದಾರಿ ಹೊಂದಿರುವ ಉಪನ್ಯಾಸಕರು ಹೊಸತನಕ್ಕೆ ಸದಾ ತೆರೆದುಕೊಂಡಿರಬೇಕು. ಆಗಮಾತ್ರ ವಿದ್ಯಾರ್ಥಿಗಳನ್ನು ಅರಿತು ಅವರಿಗೆ ಮಾರ್ಗದರ್ಶನ ನೀಡಲು ಸಾಧ್ಯವಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ವಾರುತಿ ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ), ಜಿಲ್ಲಾ ಪದವಿಪೂರ್ವ ಕಾಲೇಜು ಕನ್ನಡ ಉಪನ್ಯಾಸಕರ ಸಂ ಮತ್ತು ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಆಶ್ರಯದಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜು ವಠಾರದಲ್ಲಿ ಗುರುವಾರ ಆಯೋಜಿಸಿದ್ದ ಒಂದು ದಿನದ ಕನ್ನಡ ಕಾರ್ಯಾಗಾರದಲ್ಲಿ ಮಾತನಾಡಿದರು.

ಸಂಸ್ಥೆ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜನ್ನಾಡಿಯ ಫೇವರೆಟ್ ಕ್ಯಾಶ್ಯೂ ಇಂಡಸ್ಟ್ರೀಸ್‌ನ ಹೊಳ್ಮಗೆ ಶಂಕರ ಹೆಗ್ಡೆ ಮಾತನಾಡಿದರು.

ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಆಸ್ತಿ ಎಸ್.ಶೆಟ್ಟಿ, ಸಾನಿಕಾ ಹಾಗೂ ಅಂಕಿತಾ ಶ್ಯಾನುಭೋಗ ಅವರನ್ನು ಗೌರವಿಸಲಾಯಿತು. ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಎ.ವಿ.ಭಟ್ ಅವರನ್ನು ಸನ್ಮಾನಿಸಲಾಯಿತು. ಡಾ.ಜಯಪ್ರಕಾಶ ಶೆಟ್ಟಿ, ಡಾ.ರವಿರಾಜ ಶೆಟ್ಟಿ ಮತ್ತು ಸದಾಶಿವ ಹೊಳ್ಳ ಕಾರ್ಯಾಗಾರ ನಡೆಸಿಕೊಟ್ಟರು.

ಸುಜ್ಞಾನ ಸಂಸ್ಥೆ ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಪ್ರಾಂಶುಪಾಲ ರಂಜನ್ ಶೆಟ್ಟಿ, ಕರ್ಜೆ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಶೆಟ್ಟಿ, ತೆಂಕನಿಡಿಯೂರು ಸರ್ಕಾರಿ ಪ.ಪೂ. ಕಾಲೇಜು ಪ್ರಾಂಶುಪಾಲ ವಿಶ್ವನಾಥ ಕರಬ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕರ ಸಂ ಅಧ್ಯಕ್ಷ ಉದಯ್‌ಕುವಾರ್ ಶೆಟ್ಟಿ ಕಾಳಾವರ ಸ್ವಾಗತಿಸಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಉಪನ್ಯಾಸಕ ಸುಜಯಿಂದ್ರ ಹಂದೆ ವಂದಿಸಿದರು. ಸುಜ್ಞಾನ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಅನಿತಾ ನರೇಂದ್ರ ಕುವಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net