ಯಾವ ರೀತಿ ದಾರಿ ತಪ್ಪುತ್ತಿದ್ದಾರೆಂದು ತಿಳಿಸಲಿ

ಯಾವ ರೀತಿ ದಾರಿ ತಪ್ಪುತ್ತಿದ್ದಾರೆಂದು ತಿಳಿಸಲಿ
Published on

ಹೊಳೆನರಸೀಪುರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವ ಮಹಿಳೆಯರು ದಾರಿತಪ್ಪುತ್ತಿದ್ದಾರೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಹಿಳೆಯರು ಯಾವ ರೀತಿ ದಾರಿತಪ್ಪುತ್ತಿದ್ದಾರೆ ಎಂಬುದನ್ನು ತಿಳಿಸಬೇಕು ಎಂದು ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಶ್ರುತಿ ಗುಂಡೇಗೌಡ ಒತ್ತಾಯಿಸಿದ್ದಾರೆ.

ಗ್ಯಾರಂಟಿ ಯೋಜನೆಯನ್ನು ರಾಜ್ಯದ ಎಲ್ಲಾ ಸಮುದಾಯದ ಜನತೆ ಪಡೆಯುತ್ತಿದ್ದಾರೆ. ಈ ರೀತಿಯ ಹೇಳಿಕೆಯಿಂದ ಮಹಿಳೆಯರ ಭಾವನೆಯನ್ನು ಘಾಸಿಗೊಳಿಸಿದಂತೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಹಿಳೆಯರು ಎಚ್.ಡಿ. ಕುಮಾರಸ್ವಾಮಿಗೆ ಮತ ನೀಡಿದರೆ ಅವರ ಹೇಳಿಕೆಯನ್ನು ಬೆಂಬಲಿಸಿದಂತಾಗುತ್ತದೆ. ಮಹಿಳೆಯರ ಮೇಲೆ ಅಗೌರವದಿಂದ ಮಾತನಾಡುವ ಕುಮಾರಸ್ವಾಮಿಗೆ ಚುನಾವಣೆಯಲ್ಲಿ ಉತ್ತರ ನೀಡಬೇಕು. ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಮಹಿಳೆಯರ ಕ್ಷಮೆಯಾಚಿಸಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ, ಪ್ರಮುಖರಾದ ತುಳಸಿ, ಪಾರ್ವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net