

ರೋಣ: ಮಕ್ಕಳು ಮೊಬೈಲ್ ಬಳಸುವುದನ್ನು ಕಡಿಮೆ ಮಾಡಬೇಕು. ತಂತ್ರಜ್ಞಾನವನ್ನು ಸದುದ್ದೇಶಕ್ಕಾಗಿ ಮಾತ್ರ ಬಳಸಬೇಕು. ಪೋಕ್ಸೋ ಕಾಯ್ದೆಯ ಬಗ್ಗೆ ಪಾಲಕರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂದು ಹಿರಿಯ ವಕೀಲ ಎಂ.ಎಚ್. ಮುಲ್ಲಾ ಹೇಳಿದರು.
ತಾಲೂಕಿನ ಯಾವಗಲ್ಲ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೋಕ್ಸೋ ಕಾಯ್ದೆ ಕುರಿತು ಕಾನೂನು ಅರಿವು- ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಹೆಚ್ಚು ಅನುಕೂಲಕರವಾಗಿದೆ. ಕಾಯ್ದೆ ಕುರಿತು ಉಚಿತ ಕಾನೂನು ಸಲಹೆ ನೀಡಲಾಗುವುದು ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಮಲ್ಲನಗೌಡ ಪಾಟೀಲ ಮಾತನಾಡಿದರು. ಎಸ್ಡಿಎಂಸಿ ಸದಸ್ಯ ಶಿವಪ್ಪ ಕೊಳ್ಳಪ್ಪನವರ, ಸುಜಾತಾ ಮತ್ತಿಕಟ್ಟಿ, ಬಿ.ಸಿ. ಕೋರಿ, ಇತರರಿದ್ದರು.