ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ

Let Modi become PM again
ಬಾದಾಮಿ ಮತಕ್ಷೇತ್ರಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮತಯಾಚಿಸಿ ಮಾತನಾಡಿದರು. ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ ಇತರರಿದ್ದರು.
Published on

ಬಾದಾಮಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕೆ ಸಿಕ್ಕ ಅಪರೂಪದ ರಾಜಕಾರಣಿ. ಭಾರತ ದೇಶದ ರಕ್ಷಣೆಗೆ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗಬೇಕು ಎಂದು ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.

ಬಾಗಲಕೋಟೆ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಗುರುವಾರ ಬಾದಾಮಿ ಮತಕ್ಷೇತ್ರದ ಪಟ್ಟದಕಲ್ಲು, ಬಿ.ಎನ್. ಜಾಲಿಹಾಳ, ನಂದಿಕೇಶ್ವರ, ಗೋವನಕಿ ಗ್ರಾಮಗಳಲ್ಲಿ ಎನ್‌ಡಿಎ ಮೈತ್ರಿಕೂಟದ ಲೋಕಸಭೆ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಪರ ಮತಯಾಚಿಸಿ ಅವರು ಮಾತನಾಡಿದರು.

ಪ್ರಧಾನಿ ಅವರ ದಿಟ್ಟ ನಿರ್ಧಾರ ಇಂದು ಭಾರತ 5ನೇ ಆರ್ಥಿಕ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಬೆಳೆದು ನಿಂತಿದೆ. ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ. ಮೋದಿ ಅವರು ಅಂಬೇಡ್ಕರ್ ಅವರ ಜನ್ಮಸ್ಥಳ, ಸಮಾಧಿ ಸ್ಥಳ ಪಂಚತೀರ್ಥಗಳೆಂದು ಅಭಿವೃದ್ಧಿಪಡಿಸಿದ್ದಾರೆ. ಆದ್ದರಿಂದ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕಾದರೆ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅವರಿಗೆ ಅತ್ಯಧಿಕ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಹನುಮಂತ ಮಾವಿನಮರದ, ಮುಖಂಡ ಮಹಾಂತೇಶ ಮಮದಾಪುರ, ಹಿರಿಯರಾದ ಎ್.ಆರ್. ಪಾಟೀಲ, ಶೇಖರಗೌಡ ಪಾಟೀಲ, ಶಿವನಗೌಡ ಸುಂಕದ, ಮುತ್ತು ಉಳ್ಳಾಗಡ್ಡಿ, ಮಂಡಲ ಅಧ್ಯಕ್ಷ ನಾಗರಾಜ ಕಾಚಟ್ಟಿ, ಹೊನ್ನಯ್ಯ ಹಿರೇಮಠ ಸೇರಿ ಎರಡು ಪಕ್ಷದ ಮುಖಂಡರು, ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net