ದೇಶದ ಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ

IMG_20240209_174904
Published on


ಹಾಸನ: ದೇಶದ ಭದ್ರತೆಗಾಗಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಮಂತ್ರಿ ಯಾಗಬೇಕು ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.


ಆಲೂರು ಪಟ್ಟಣದಲ್ಲಿ 2024ಕ್ಕೆ ಮತ್ತೊಮ್ಮೆ ಮೋದಿ ಗೋಡೆ ಬರಹ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿ, 2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ಮೋದಿ ಅವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಬಿಜೆಪಿ ಕಾರ್ಯಕರ್ತರು ಮುಖಂಡರು ತಾಲೂಕು, ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಬೆಂಬಲ ನೀಡುತ್ತಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆಯ ಮೇರೆಗೆ ಗೋಡೆ ಬರಹ ಅಭಿಯಾನ ಆರಂಭಿಸಿದ್ದೇವೆ ಎಂದರು.


ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಸುಮಾರು 500 ವರ್ಷಗಳ ನಂತರ, ಭಾರತೀಯರ ಕನಸನ್ನು ನನಸು ಮಾಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದರು.


ಬೈರಾಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಗಣೇಶ್, ನಂಜುಂಡಪ್ಪ, ರುದ್ರೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರೇಹಳ್ಳಿ ಅಮಿತ್ ಶೆಟ್ಟಿ, ಆಲೂರು ಕಟ್ಟಾಯ ಮಂಡಲದ ಪ್ರಧಾನ ಕಾರ್ಯದರ್ಶಿ ಭರಣ್, ಬಿಜೆಪಿ ಮುಖಂಡರಾದ ಕಟ್ಟೆಗದ್ದೆ ನಾಗರಾಜ್, ಕಿರಣ್, ಲಿಖಿತ್, ಕೃಷ್ಣಮೂರ್ತಿ, ಜೆಸಿಬಿ ರವಿ, ಭೂತ್ ಅಧ್ಯಕ್ಷ ಕರಿಯಯ್ಯ, ಧರ್ಮ, ದೊರೆಗೌಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net