ಹೆಚ್ಚಿನ ಸಂಖ್ಯೆಯಲ್ಲಿ ಹಾಡಿ ಜನರು ಶಸ್ತ್ರಚಿಕಿತ್ಸೆಗೊಳಪಡಲಿ

ಸರಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಶಿಬಿರವನ್ನು ರವಿಕುಮಾರ್, ಗೋಪಿನಾಥ್ ಪರಿಶೀಲಿಸಿದರು. ಪಾರ್ಥಸಾರಥಿ ಇದ್ದರು.
ಸರಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಶಿಬಿರವನ್ನು ರವಿಕುಮಾರ್, ಗೋಪಿನಾಥ್ ಪರಿಶೀಲಿಸಿದರು. ಪಾರ್ಥಸಾರಥಿ ಇದ್ದರು.
Published on

ಸರಗೂರು: ತಾಲೂಕು ಆರೋಗ್ಯ ಕೇಂದ್ರ, ಸ್ವಾಮಿ ವಿವೇಕನಂದ ಯೂತ್ ಮೂಮೆಂಟ್ ಸಹಯೋಗದಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಹಾಡಿ ಜನರಿಗೆ ವಿಶೇಷ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಶಿಬಿರ ಆಯೋಜಿಸಲಾಗಿತ್ತು.

ಜಿಲ್ಲಾ ಕುಟುಂಬ ಕಲ್ಯಾಣ್ಯಾಧಿಕಾರಿ ಡಾ.ಗೋಪಿನಾಥ್ ಮತ್ತು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಶಿಬಿರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಗೋಪಿನಾಥ್ ಮಾತನಾಡಿ, ವಿಶೇಷವಾಗಿ ಹಾಡಿ ಜನರಿಗೆ ವಿಶೇಷ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಶಿಬಿರ ನಡೆಸುತ್ತಿರುವುದು ಹೆಮ್ಮೆಯ ವಿಷಯ. ಹಾಡಿ ಜನರನ್ನು ಮನವೊಲಿಸಿ ಕರೆತಂದಿರುವ ಡಾ.ರವಿಕುಮಾರ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ ಧನ್ಯವಾದ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, 19 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದ್ದು, ಇದರಲ್ಲಿ 18 ಜನರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿ ಜನರು ಬಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ನವೀನ್, ಅರಿವಳಿಕೆ ತಜ್ಞ ಡಾ.ಕಿರಣ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಭಾಗ್ಯಲಕ್ಷ್ಮೀ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಪಾರ್ಥಸಾರಥಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಆಡಳಿತ ವೈದ್ಯಾಧಿಕಾರಿ ಡಾ.ಅಭಿಲಾಷ್, ಮೇಲ್ವಿಚಾರಕ ವೆಂಕಟಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net