ಮಕ್ಕಳ ಬೆಳವಣಿಗೆಗೆ ತಾಯಂದಿರು ಶ್ರಮಿಸಲಿ

1 NRD-2- ANGANAVADi
Published on

ನರಗುಂದ: ಅಂಗನವಾಡಿ ಮಕ್ಕಳ ಶೈಕ್ಷಣಿಕ, ಆರೋಗ್ಯ ಹಾಗೂ ಸರ್ವತೋಮುಖ ಬೆಳೆವಣಿಗೆಗೆ ಸರ್ಕಾರ ಹಲವಾರು ಯೋಜನೆ ಜಾರಿಗೊಳಿಸಿದೆ. ಮಕ್ಕಳಿಗೆ ಇದರ ಪ್ರಯೋಜನ ದೊರಕಿಸಲು ತಾಯಂದಿರು ಹೆಚ್ಚಿನ ಹೊಣೆಗಾರಿಕೆ ವಹಿಸಿಕೊಳ್ಳಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಮಲಾ ಹುಲಕೋಟಿ ಹೇಳಿದರು.
ರಾಷ್ಟ್ರೀಯ ಪೋಷಣ ಅಭಿಯಾನ ದಿನಾಚರಣೆ ಅಂಗವಾಗಿ ಪಟ್ಟಣದ ಅಧ್ಯಾಪಕನಗರ ಬಡಾವಣೆಯ ಅಂಗನವಾಡಿ ಕೇಂದ್ರ ಸಂಖ್ಯೆ-87ರಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನ ಮಹತ್ತರ ಕಾರ್ಯಕ್ರಮವಾಗಿದೆ. ಕಿಶೋರಿ ಬಾಲಕಿಯರಿಂದ ಹಿಡಿದು ಗರ್ಭಿಣಿಯರು, ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವುದು ಯೋಜನೆಯ ಮುಖ್ಯ ಉದ್ದೇಶ ಎಂದು ತಿಳಿಸಿದರು.
ಪುರಸಭೆ ಉಪಾಧ್ಯಕ್ಷೆ ಕಾಶವ್ವ ಮಳಗಿ ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಎಸ್.ಆರ್. ಹಿರೇಮಠ, ವೈ.ಐ. ಕುಂಬಾರ, ಶಿವಯ್ಯ ಹಿರೇಮಠ, ಲಲಿತಾ ದೊಡಮನಿ, ಲಕ್ಷ್ಮೀ ಸಂಗಳಮಠ, ಕೆ.ಬಿ. ಪೂಜಾರ, ಪರಿಸರ ಪ್ರೇಮಿ ಜಗದೀಶ ಗೊಂಡಬಾಳ, ಪೋಷಣ ಅಭಿಯಾನ ಸಂಯೋಜಕ ಮಂಜುನಾಥ ಗುಗ್ಗರಿ, ಅಂಗನವಾಡಿ ಕಾರ್ಯಕರ್ತೆ ಕೆ.ಡಿ. ಚಕ್ರಸಾಲಿ, ಪಿ.ಬಿ. ಹೂಗಾರ, ಎಲ್.ಎಚ್. ಭಜಂತ್ರಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net