ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಲಿ

8 GVT 06
ಗಂಗಾವತಿ ಅಕ್ಷರ ಪಬ್ಲಿಕ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಆಯೋಜಿಸಿದ್ದ ವಿಜ್ಞಾನ ಮತ್ತು ಕಲಾ ವಸ್ತುಪ್ರದರ್ಶನದಲ್ಲಿ ಪ್ರತಿಕೃತಿಗಳ ಬಗ್ಗೆ ಮಾಹಿತಿ ನೀಡುತ್ತಿರುವ ವಿದ್ಯಾರ್ಥಿಗಳು.
Published on

ಗಂಗಾವತಿ: ನಗರದ ಅಕ್ಷರ ಪಬ್ಲಿಕ್ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ವಿಜ್ಞಾನ ಮತ್ತು ಕಲಾ ವಸ್ತುಪ್ರದರ್ಶನ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಮೂರು ದಿನಗಳ ವಸ್ತುಪ್ರದರ್ಶನದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ಪ್ರತಿಕೃತಿಗಳ ಬಗ್ಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಶಾಲಾಡಳಿತ ಮಂಡಳಿ ಅಧ್ಯಕ್ಷ ರವಿಚೈತನ್ಯ ರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು. ಹೊಸದನ್ನು ಹುಡುಕಲು ಪ್ರಯತ್ನಿಸಬೇಕು. ವಿಜ್ಞಾನವು ಜೀವನದ ಎಲ್ಲ ರಂಗಗಳಲ್ಲೂ ಮಹತ್ವದ ಪಾತ್ರ ವಹಿಸುತ್ತದೆ. ಮಕ್ಕಳಲ್ಲಿ ಹೊಸ ಆಲೋಚನೆ ಹಾಗೂ ಅನ್ವೇಷಣಾ ಮನೋಭಾವ ಬೆಳೆಯಲು ವಿಜ್ಞಾನ ವಸ್ತು ಪ್ರದರ್ಶನ ಪೂರಕವಾಗಿದೆ ಎಂದರು.

ಮುಖ್ಯಶಿಕ್ಷಕಿ ಸತ್ತಿ ಹಿಮಾರೆಡ್ಡಿ ಮಾತನಾಡಿದರು. 60ಕ್ಕೂ ಹೆಚ್ಚು ಪ್ರತಿಕೃತಿಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಮಾರ್ಗದರ್ಶಕ ಶಿಕ್ಷಕರಾದ ತೇಜಸ್ವಿ, ಗೌರಿ, ಪಾರ್ವತಿ, ಪುಷ್ಪಾ, ಅನುಪಮಾ, ರೇಷ್ಮಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net