ವಿದ್ಯಾರ್ಥಿಗಳಿಗೆ ಸೇವೆ ಉಸಿರಾಗಲಿ

ಪಟ್ಟಣದಲ್ಲಿ ಸಮಾಜ ಸೇವಕ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್
ಪಟ್ಟಣದಲ್ಲಿ ಸಮಾಜ ಸೇವಕ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಉಚಿತ ಅರೋಗ್ಯ ತಪಾಸಣೆ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಿದರು. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಶ್ರೀ ಶಿವಬಸವ ಸ್ವಾಮೀಜಿ, ಮಲ್ಲಿಕಾರ್ಜುನ ಬಾಲದಂಡಿ, ನಟರಾಜ್, ಡಾ.ಸಿ.ಟಿ.ಮೂರ್ತಿ ಇದ್ದರು.
Published on

ಕೆ.ಆರ್.ಪೇಟೆ: ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಸಾಧನೆ ಮಾಡಬೇಕು. ಸೇವಾ ಮನೋಭಾವ ಹಾಗೂ ಮಾನವೀಯ ಮೌಲ್ಯಗಳು ಜೀವನದ ಉಸಿರಾಗಬೇಕು ಎಂದು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.

ಪಟ್ಟಣದಲ್ಲಿ ಸಮಾಜ ಸೇವಕ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಆರೋಗ್ಯಉಚಿತ ತಪಾಸಣೆ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಸ್ವಾರ್ಥವೇ ತುಂಬಿರುವ ಇಂದಿನ ಸಮಾಜದಲ್ಲಿ ಸಮಾಜಮುಖಿಯಾಗಿ ಆಲೋಚಿಸಿ ನೊಂದ ಜನರಿಗೆ ಕೈಲಾದ ಸಹಾಯ ಮಾಡುವ ಕಳಕಳಿ ಹೊಂದಿರುವ ಮಲ್ಲಿಕಾರ್ಜುನ ಅವರಂತಹ ಸಮಾಜ ಸೇವಕರು ಇಂದಿನ ಸಮಾಜಕ್ಕೆ ಅಗತ್ಯವಾಗಿ ಬೇಕಾಗಿದ್ದಾರೆ. ಆರ್‌ಟಿಓ ಅಧಿಕಾರಿಗಳಾದ ಮಲ್ಲಿಕಾರ್ಜುನ ಅವರು ತಾವು ಕಷ್ಟಪಟ್ಟು ಗಳಿಸಿದ ಹಣದಲ್ಲಿ ಅಲ್ಪ ಭಾಗವನ್ನು ಆರೋಗ್ಯ ಸಂವರ್ಧನೆ ಹಾಗೂ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬಳಸುವ ಮೂಲಕ ನಾಗರಿಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ಕೆಲಸನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ದೇವರಾಜ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ನಟರಾಜ್, ಸಾರಿಗೆ ತೆರಿಗೆ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಿ.ಟಿ.ಮೂರ್ತಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಬೇಬಿ ಬೆಟ್ಟದ ಶ್ರೀ ಶಿವಬಸವ ಸ್ವಾಮೀಜಿ, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಖಜಾಂಚಿ ಚಂದ್ರಶೇಖರ್ ಗುಳ್ಳೇದ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶಿವಾನಂದ ಪುರಿ ಸ್ವಾಮೀಜಿ, ಕಾಪನಹಳ್ಳಿ ಗವಿಮಠದ ಶ್ರೀ ಸ್ವತಂತ್ರ ಚನ್ನವೀರಯ್ಯ ಸ್ವಾಮೀಜಿ, ತೆಂಡೇಕೆರೆ ಬಾಳೆ ಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಗಾಯತ್ರಿ, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿರಾಮ್, ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಗಂಜಿಗೆರೆ ಮಹೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net