ಸಿದ್ದರಾಮಯ್ಯ ಒಣ ರಾಜಕೀಯ ಬಿಡಲಿ

new bjp naveen
Published on

ಹುಬ್ಬಳ್ಳಿ : ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಯಾವೊಬ್ಬ ಮಂತ್ರಿಯೂ ಹಳ್ಳಿಗಳಿಗೆ ಭೇಟಿ ನೀಡಿ, ರೈತರೊಂದಿಗೆ ರ್ಚಚಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಣ ರಾಜಕೀಯ ಬಿಟ್ಟು, ಬರಗಾಲ ನಿರ್ವಹಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹಾಗೂ ಧಾರವಾಡ ಲೋಕಸಭೆ ಕ್ಲಸ್ಟರ್ ಪ್ರಮುಖ ಕೆ. ನವೀನ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಹಾಗೂ ಬೆಂಗಳೂರು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬರದ ಬಗ್ಗೆ ರ್ಚಚಿಸಲು ಅವಕಾಶ ಕೇಳಿದರೂ ಕೊಡಲಿಲ್ಲ ಎಂದು ದೂರಿದರು.

ಬರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಹಾಗೂ ರೈತರ ಬ್ಯಾಂಕ್ ಖಾತೆಗಳಿಗೆ ಬರ ಪರಿಹಾರ ಜಮಾ ಮಾಡುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದರೆ, ಇದುವರೆಗೆ ರೈತರ ಖಾತೆಗೆ ಪರಿಹಾರದ ಹಣ ಜಮೆ ಆಗಿಲ್ಲ. ಸರ್ಕಾರ ಇದೇ ರೀತಿ ಬೇಜವಾಬ್ದಾರಿ ಮುಂದುವರಿಸಿದರೆ ಬಿಜೆಪಿ ನೇತೃತ್ವದಲ್ಲಿ ರೈತರೊಂದಿಗೆ ಸೇರಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರದಿಂದ ರಾಜ್ಯಕ್ಕೆ ಹಣ ಬಂದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. 15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಕ್ಕೆ ನೀಡಬೇಕಾದ ಎಲ್ಲ ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ರಾಜ್ಯ ಸರ್ಕಾರ ತನ್ನ ಯೋಜನೆಗಳೆಂದು ಜಾಹೀರಾತುಪಡಿಸುತ್ತಿರುವ ಎಲ್ಲ ಯೋಜನೆಗಳು ಕೇಂದ್ರ ಸರ್ಕಾರದ್ದು ಎಂದು ತಿಳಿಸಿದರು.

ಬರಗಾಲ ನಿರ್ವಹಣೆಗೆ ತುರ್ತಾಗಿ 18.50 ಸಾವಿರ ಕೋಟಿ ರೂ. ನೀಡುವಂತೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಶೀಘ್ರ ಅಗತ್ಯ ಹಣ ಬಿಡುಗಡೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶೆಟ್ಟರ್ ಬೇಸರ : ಇತ್ತೀಚೆಗೆ ಏರ್ಪಾಟಾಗಿದ್ದ ಕಾರ್ಯಕ್ರಮದಲ್ಲಿ ತಮ್ಮ ಬೆಂಬಲಿಗರಿಗೆ ಕಾರ್ಯಕ್ರಮಗಳ ಮಾಹಿತಿ ಮತ್ತು ಆಹ್ವಾನ ನೀಡದಿರುವ ಬಗ್ಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದ್ದು ನಿಜ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಲಾಗಿದೆ ಎಂದು ಎಂಎಲ್​ಸಿ ನವೀನ ಹೇಳಿದರು.

ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ವಾಪಸಾದ ಕೆಲ ದಿನಗಳ ನಂತರ ಅವರ ಬೆಂಬಲಿಗರೂ ಪಕ್ಷಕ್ಕೆ ಮರಳಿದ್ದರು. ಶೆಟ್ಟರ್ ಹಾಗೂ ಅವರ ಬೆಂಬಲಿಗರೆಲ್ಲ ಬಿಜೆಪಿಯವರೇ. ಅವರು ಸಹ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪಕ್ಷ ಯಾರನ್ನೂ ಕಡೆಗಣಿಸಿಲ್ಲ. ಸಮಸ್ಯೆ ಇದ್ದರೆ ಸರಿಪಡಿಸಿಕೊಳ್ಳುತ್ತೇವೆ ಎಂದರು.

ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಲ್ಲ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಉತ್ತಮ ಸಂಬಂಧ ಇದೆ. ಯಾವುದೇ ಅಪಸ್ವರ ಇಲ್ಲ ಎಂದರು.

ಸಿದ್ದರಾಮಯ್ಯ ಒಣ ರಾಜಕೀಯ ಬಿಡಲಿ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ

ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಯಾವೊಬ್ಬ ಮಂತ್ರಿಯೂ ಹಳ್ಳಿಗಳಿಗೆ ಭೇಟಿ ನೀಡಿ, ರೈತರೊಂದಿಗೆ ರ್ಚಚಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಣ ರಾಜಕೀಯ ಬಿಟ್ಟು, ಬರಗಾಲ ನಿರ್ವಹಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ಹಾಗೂ ಧಾರವಾಡ ಲೋಕಸಭೆ ಕ್ಲಸ್ಟರ್ ಪ್ರಮುಖ ಕೆ. ನವೀನ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಹಾಗೂ ಬೆಂಗಳೂರು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಬರದ ಬಗ್ಗೆ ರ್ಚಚಿಸಲು ಅವಕಾಶ ಕೇಳಿದರೂ ಕೊಡಲಿಲ್ಲ ಎಂದು ದೂರಿದರು.

ಬರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಹಾಗೂ ರೈತರ ಬ್ಯಾಂಕ್ ಖಾತೆಗಳಿಗೆ ಬರ ಪರಿಹಾರ ಜಮಾ ಮಾಡುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದರೆ, ಇದುವರೆಗೆ ರೈತರ ಖಾತೆಗೆ ಪರಿಹಾರದ ಹಣ ಜಮೆ ಆಗಿಲ್ಲ. ಸರ್ಕಾರ ಇದೇ ರೀತಿ ಬೇಜವಾಬ್ದಾರಿ ಮುಂದುವರಿಸಿದರೆ ಬಿಜೆಪಿ ನೇತೃತ್ವದಲ್ಲಿ ರೈತರೊಂದಿಗೆ ಸೇರಿ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕೇಂದ್ರದಿಂದ ರಾಜ್ಯಕ್ಕೆ ಹಣ ಬಂದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. 15ನೇ ಹಣಕಾಸು ಆಯೋಗದ ಪ್ರಕಾರ ರಾಜ್ಯಕ್ಕೆ ನೀಡಬೇಕಾದ ಎಲ್ಲ ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ರಾಜ್ಯ ಸರ್ಕಾರ ತನ್ನ ಯೋಜನೆಗಳೆಂದು ಜಾಹೀರಾತುಪಡಿಸುತ್ತಿರುವ ಎಲ್ಲ ಯೋಜನೆಗಳು ಕೇಂದ್ರ ಸರ್ಕಾರದ್ದು ಎಂದು ತಿಳಿಸಿದರು.

ಬರಗಾಲ ನಿರ್ವಹಣೆಗೆ ತುರ್ತಾಗಿ 18.50 ಸಾವಿರ ಕೋಟಿ ರೂ. ನೀಡುವಂತೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಶೀಘ್ರ ಅಗತ್ಯ ಹಣ ಬಿಡುಗಡೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಾಕ್ಸ್

ಇತ್ತೀಚೆಗೆ ಏರ್ಪಾಟಾಗಿದ್ದ ಕಾರ್ಯಕ್ರಮದಲ್ಲಿ ತಮ್ಮ ಬೆಂಬಲಿಗರಿಗೆ ಕಾರ್ಯಕ್ರಮಗಳ ಮಾಹಿತಿ ಮತ್ತು ಆಹ್ವಾನ ನೀಡದಿರುವ ಬಗ್ಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಬೇಸರ ವ್ಯಕ್ತಪಡಿಸಿದ್ದು ನಿಜ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಲಾಗಿದೆ ಎಂದು ಎಂಎಲ್​ಸಿ ನವೀನ ಹೇಳಿದರು.

ಜಗದೀಶ ಶೆಟ್ಟರ್ ಅವರು ಬಿಜೆಪಿಗೆ ವಾಪಸಾದ ಕೆಲ ದಿನಗಳ ನಂತರ ಅವರ ಬೆಂಬಲಿಗರೂ ಪಕ್ಷಕ್ಕೆ ಮರಳಿದ್ದರು. ಶೆಟ್ಟರ್ ಹಾಗೂ ಅವರ ಬೆಂಬಲಿಗರೆಲ್ಲ ಬಿಜೆಪಿಯವರೇ. ಅವರು ಸಹ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪಕ್ಷ ಯಾರನ್ನೂ ಕಡೆಗಣಿಸಿಲ್ಲ. ಸಮಸ್ಯೆ ಇದ್ದರೆ ಸರಿಪಡಿಸಿಕೊಳ್ಳುತ್ತೇವೆ ಎಂದರು.

ಧಾರವಾಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಲ್ಲ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಉತ್ತಮ ಸಂಬಂಧ ಇದೆ. ಯಾವುದೇ ಅಪಸ್ವರ ಇಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net