ವಿದ್ಯಾರ್ಥಿಗಳು ಶಿಸ್ತು, ಉತ್ತಮ ಗುಣ ಬೆಳೆಸಿಕೊಳ್ಳಲಿ

BKL VAIDYA
Published on

ಭಟ್ಕಳ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಉತ್ತಮ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣ ನಿಮ್ಮನ್ನು ಉತ್ತಮ ವ್ಯಕ್ತಿಯನ್ನಾಗಿ ರೂಪಿಸುತ್ತದೆ ಎಂದು ಉತ್ತರ ಕನ್ನಡ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್​ನಲ್ಲಿ ಶನಿವಾರ ಏರ್ಪಡಿಸಿದ್ದ ವಿವಿಧ ಘಟಕಗಳ 2024-25ನೇ ಸಾಲಿನ ಕಾರ್ಯ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ನಿಮ್ಮ ಶಿಕ್ಷಣಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುತ್ತಿದ್ದು, ಸರ್ಕಾರದ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಅತ್ಯುತ್ತಮ ವ್ಯಕ್ತಿಗಳಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜ್ ಪ್ರಾಚಾರ್ಯ ನಾಗೇಶ ಶೆಟ್ಟಿ, ಸಿಡಿಸಿ ಸದಸ್ಯರಾದ ಎಂ.ಕೆ. ನಾಯ್ಕ ಮತ್ತು ಸೋಮಯ್ಯ ಗೊಂಡ ಮಾತನಾಡಿದರು.

ಕಾಲೇಜಿನ ಐಕ್ಯೂಎಸಿ ಸಂಯೋಜಕ ಸುರೇಶ ಮೆಟಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಪ್ರತಿನಿಧಿ ಹಿತೇಶ ನಾಯ್ಕ, ಸಿಡಿಸಿ ಸದಸ್ಯರು ಉಪಸ್ಥಿತರಿದ್ದರು. ಸಚಿವ ಮಂಕಾಳ ವೈದ್ಯ ಅವರನ್ನು ಸನ್ಮಾನಿಸಲಾಯಿತು. ಸಹಾಯಕ ಪ್ರಾಧ್ಯಾಪಕ ಮೋಹಿನಿ ಅತ್ತಿಮನಿ, ಸಹಾಯಕ ಪ್ರಾಧ್ಯಾಪಕ ಧನರಾಜ್ ಎನ್.ಎ. ಹಾಗೂ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net