

ಮೈಸೂರು: ಶಾಲಾ ದಿನಗಳಿಂದಲೇ ವಿದ್ಯಾರ್ಥಿಗಳಲ್ಲಿ ಕನ್ನಡ ಪ್ರಜ್ಞೆ ಜಾಗೃತಗೊಳಿಸಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ತಿಳಿಸಿದರು.
ನಗರದ ರೂಪಾನಗರದಲ್ಲಿರುವ ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಜನಸೇವಕ ಯುವ ಬ್ರಿಗೇಡ್ ವತಿಯಿಂದ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ನನ್ಮಾನಿಸಿ ಮಾತನಾಡಿದರು.
ಕನ್ನಡ ಕರ್ನಾಟಕದ ಜನರ ಬದುಕಿನ ಭಾಷೆ. ಜನಭಾಷೆ ಅಷ್ಟೇ ಅಲ್ಲ ಜನಸಾಮಾನ್ಯರ ಭಾಷೆ. ಇಂತಹ ಹಿನ್ನೆಲೆಯಲ್ಲಿ ಕನ್ನಡ ನಾಡಿನಲ್ಲಿ ಪ್ರತಿ ವಿದ್ಯಾರ್ಥಿಯೂ ಕನ್ನಡ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಅದು ಮುಂದೆ ಕನ್ನಡತನ ಬೆಳೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.