

ಅರಕಲಗೂಡು: ವಿದ್ಯಾರ್ಥಿಗಳು ಗ್ರಂಥಾಲಯಗಳಿಗೆ ಭೇಟಿ ನೀಡಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಹೇಳಿದರು.
ತಾಲೂಕಿನ ಮಲ್ಲಿಪಟ್ಟಣ ಸಂತೆಮಾಳದಲ್ಲಿ ಶುಕ್ರವಾರ ನೂತನವಾಗಿ ನಿರ್ಮಿಸಿರುವ ಸಾರ್ವಜನಿಕ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿನಿತ್ಯ ಗ್ರಂಥಾಲಯಗಳಲ್ಲಿ ಪುಸ್ತಕಗಳನ್ನು ಓದುವುದರಿಂದ ಜ್ಞಾನ ಭಂಡಾರ ವೃದ್ಧಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಗ್ರಾಪಂ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷೆ ಸುಮಿತ್ರಮ್ಮ, ಸದಸ್ಯ ಚಂದ್ರೇಗೌಡ, ಯೋಗೇಶ್, ನಾಗರಾಜು, ಲಕ್ಷ್ಮೀ, ಪೂಜಾ ಇತರರಿದ್ದರು.