ವಿದ್ಯಾರ್ಥಿಗಳು ಒಂದು ನಿರ್ದಿಷ್ಟ ಗುರಿ ಹೊಂದಲಿ

Let students have a specific goal
ಹೊಸೂರ-ರಬಕವಿಯ ಹಜಾರೆ ಫೌಂಡೇಷನ ಅವರ ಪದ್ಮಾವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಮಿಲನ್ ಮತ್ತು ಪುರಸ್ಕಾರ 2023 ಕಾರ್ಯಕ್ರಮದಲ್ಲಿ ಕೆಸಿಇಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರೊ. ಎಂ. ಎಸ್. ಬದಾಮಿ, ಭಾರತಿ ತಾಳಿಕೋಟಿ ಇದ್ದರು.
Published on

ರಬಕವಿ/ಬನಹಟ್ಟಿ : ವಿದ್ಯಾರ್ಥಿಗಳು ನಿರ್ದಿಷ್ಟ ಗುರಿ ಹೊಂದುವ ಮೂಲಕ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕೆಂದು ನಿವೃತ್ತ ಅರ್ಥಶಾಸ್ತ್ರ ಉಪನ್ಯಾಸಕ ಪ್ರೊ. ಎಂ.ಎಸ್. ಬಾದಾಮಿ ಹೇಳಿದರು.

ಹೊಸೂರ-ರಬಕವಿಯ ಹಜಾರೆ ಫೌಂಡೇಷನ್ ಅವರ ಪದ್ಮಾವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡ ‘ಮಿಲನ 2023’ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಮತ್ತು ಪುರಸ್ಕಾರ, ಕೆಸಿಇಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿವಿಧ ಪರೀಕ್ಷೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸಂಸ್ಥೆ ಕಾರ್ಯಾಧ್ಯಕ್ಷ ಸತೀಶ ಹಜಾರೆ, ಆಡಳಿತಾಧಿಕಾರಿ ಭಾರತಿ ತಾಳಿಕೋಟಿ, ಪ್ರಾಚಾರ್ಯ ಶ್ರೀಶೈಲ ಕುಂಬಾರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಸತೀಶ ಬೆಳಗಲಿ, ಬಸವರಾಜ ಕಲಾದಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net