

ಅರಕಲಗೂಡು: ವಿದ್ಯಾರ್ಥಿಗಳು ಓದಿನೊಂದಿಗೆ ವ್ಯಾವಹಾರಿಕ ಜ್ಞಾನಗಳಿಸುವ ಕಡೆಗೂ ಕಾಳಜಿ ವಹಿಸಬೇಕು ಎಂದು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಸವರಾಜು ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಆಹಾರ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.
ದ್ಯಾರ್ಥಿಗಳು ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಿದರೆ ಭವಿಷ್ಯದಲ್ಲಿ ನೆರವಿಗೆ ಬರಲಿದೆ. ಈ ನಿಟ್ಟಿನಲ್ಲಿ ಆಹಾರ ಮೇಳ ಆಯೋಜಿಸಲಾಗಿದೆ. ಆಹಾರ ತಯಾರಿಕೆ ಕುರಿತು ತಿಳಿವಳಿಕೆ ಮೂಡಿಸಿ ವ್ಯಾವಹಾರಿಕ ಜ್ಞಾನ ವೃದ್ಧಿಗೆ ಪ್ರೇರಕವಾಗಲಿದೆ ಎಂದರು.
ಬಾಲಕಿಯರು ಬಗೆ ಬಗೆಯ ಖಾದ್ಯ ಬಿರಿಯಾನಿ, ಚಿಕನ್ ಕಬಾಬ್, ಪಾನಿಪೂರಿ, ಜಾಮೂನ್, ಜಿಲೇಬಿ ಇತ್ಯಾದಿ ಸಿಹಿ ತಿನಿಸುಗಳನ್ನು ಮಾರಾಟಕ್ಕಿಟ್ಟು ಭರ್ಜರಿ ವಹಿವಾಟು ನಡೆಸಿದರು.