

ಅಥಣಿ ಗ್ರಾಮೀಣ: ವಿದ್ಯಾರ್ಥಿಗಳು ಪಠ್ಯೇದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಕಾಲೇಜಿನ ಸೌಲಭ್ಯ ಪಡೆದು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ವರ್ಧಮಾನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ಅಸ್ಕಿ ಹೇಳಿದರು.
ಅಥಣಿ ತಾಲೂಕಿನ ನಂದಗಾಂವ ಗ್ರಾಮದ ಶ್ರೀ ವರ್ಧಮಾನ ಶಿಕ್ಷಣ ಸಂಸ್ಥೆಯ ನ್ಯೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಜಿಲ್ಲಾಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಪುಸ್ತಕಗಳನ್ನು ಒದಗಿಸಲಾಗುವುದು ಎಂದರು.
ಶಾಲೆಯ ನಿರ್ದೇಶಕ ಅಣ್ಣಾಸಾಹೇಬ ಪಾಟೀಲ ವಿದ್ಯಾರ್ಥಿಗಳನ್ನು ಸತ್ಕರಿಸಿದರು. ಸಂಸ್ಥೆ ಉಪಾಧ್ಯಕ್ಷ ರಾಜೇಂದ್ರ ಪಾಟೀಲ, ನಿರ್ದೇಶಕರಾದ ಅರುಣ ಯಲಗುದ್ರಿ, ವೆಂಕಪ್ಪ ಬಳೋಜ, ಟಿ.ಪಿ.ಯಲಿಗೌಡರ, ಜನಕರಾಜ ದುರ್ಗಣ್ಣವರ, ಟಿ.ಎಂ.ಯಲಿಗೌಡರ, ಪ್ರಾಚಾರ್ಯ ಧರೆಪ್ಪ ತೇರದಾಳ, ಅರ್ಚನಾ ಪೂಜಾರಿ, ಆದಿನಾಥ ಶಿರಹಟ್ಟಿ, ಮಂಜುನಾಥ ಬಂತಿ ಇತರರು ಇದ್ದರು.