

ಮಸ್ಕಿ: ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಅನುಕೂಲವಾಗಿರುವ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಮಲ್ಲಯ್ಯ ಅಂಬಾಡಿ ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಪ್ರಸಕ್ತ ಶೈಕ್ಷಣಿಕ ವರ್ಷದ ಪಿಯು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು. ಪುರಸಭೆ ಸದಸ್ಯೆ ಭಾಗ್ಯಮ್ಮ ಕ್ರೀಡಾಜ್ಯೋತಿ ಸ್ವಾಗತಿಸಿದರು.
ಪ್ರಾಚಾರ್ಯ ರಂಗಪ್ಪ, ಉಪನ್ಯಾಸಕರಾದ ಮಹಾಂತೇಶ ಮಸ್ಕಿ, ರಂಗಯ್ಯ ಶೆಟ್ಟಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಂಪಾಪತಿ ಹೂಗಾರ, ನಾಗೇಶ ಹಾಲಾಪುರ ಇದ್ದರು.