ವಿದ್ಯಾರ್ಥಿಗಳು ಸಮಾಜದ ಸ್ವಾಸ್ಥೃ ಕಾಪಾಡಲಿ

31 mul 1
Published on

ಮುಳಗುಂದ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಸಮಾಜದ ಸ್ವಾಸ್ಥೃ ಕಾಪಾಡುವುದು ವಿದ್ಯಾರ್ಥಿಗಳ ಕರ್ತವ್ಯವಾಗಬೇಕು. ಈ ನಿಟ್ಟಿನಲ್ಲಿ ಸ್ವಾಸ್ಥೃ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ನಾಗೇಶ ವೈ. ಹೇಳಿದರು.

ಇಲ್ಲಿನ ಎಸ್‌ಜೆಜೆಎಂ ಮಹಾವಿದ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಎನ್‌ಎಸ್‌ಎಸ್ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಾಸ್ಥೃ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಾಚಾರ್ಯ ಎ.ಎಂ. ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಶಿರಹಟ್ಟಿ ತಾಲೂಕು ಯೋಜನಾಧಿಕಾರಿ ಪುನೀತ ಓಲೇಕಾರ, ಮೇಲ್ವಿಚಾರಕಿ ಶಾಂತಾ ಬೆನಕಣ್ಣವರ, ಶಿಕ್ಷಕರಾದ ಸಿ.ಎಚ್. ದೊಡ್ಡಮನಿ, ಎಸ್.ಆರ್. ಹಿರೇಗೌಡರ, ಎಂ.ಬಿ. ಕುರಬಗೌಳಿ, ಮಂಜು ಅಳಲಕೇರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net