ಶಿಕ್ಷಕರು ಸಂಸ್ಕಾರಯುತ ಶಿಕ್ಷಣ ನೀಡಲಿ

16 SND 05
ಸಿಂಧನೂರು ತಾಲೂಕು ಅರಳಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭೂಮಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆತಿಯಿಂದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕ ಶಂಕರ ವಾಲೇಕಾರ, ಬಸವರಾಜ ವಗರನಾಳ, ಪ್ರೌಢ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸೂಗಪ್ಪ ಬಳಿಗಾರ, ಮುಖ್ಯಶಿಕ್ಷಕ ಲಿಂಗರಾಜ ಇತರರಿದ್ದರು.
Published on

ಸಿಂಧನೂರು: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವುದು ಅತ್ಯವಶ್ಯಕವಾಗಿದೆ. ಇದು ಮುಂದಿನ ಭವಿಷ್ಯಕ್ಕೂ ನಾಂದಿಯಾಗಲಿದೆ ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕ ಶಂಕರ ವಾಲೇಕಾರ್ ಹೇಳಿದರು.

ತಾಲೂಕಿನ ಅರಳಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಭೂಮಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಬಸವರಾಜ ವಗರನಾಳ ಮಾತನಾಡಿದರು. ಭೂಮಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಬಸವರಾಜ ಕುಂಬಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಯಲ್ಲಪ್ಪ ಕಾರಟಗಿ, ಪ್ರೌಢ ಶಾಲೆ ಎಸ್ಡಿಎಂಸಿ ಅಧ್ಯಕ್ಷ ಸೂಗಪ್ಪ ಬಳಿಗಾರ, ಮುಖ್ಯಶಿಕ್ಷಕ ಲಿಂಗರಾಜ, ಗ್ರಾಪಂ ಮಾಜಿ ಸದಸ್ಯ ಶಿವರಾಜ ಅರಗಿ, ಮಾಬುಸುಬಾನಿ, ಹನುಮಂತಪ್ಪ, ದೇವಪ್ಪ ಸುಳಿವಿಬಾವಿ ಇತರರಿದ್ದರು.

ಬಹುಮಾನ ವಿತರಣೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವೆಂಕಟೇಶ ಯಲ್ಲಪ್ಪ ಹಾಗೂ ಶಿವಕುಮಾರ ದೇವಪ್ಪರಿಗೆ 2,500 ರೂ. ಚೆಕ್, ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಮೇಘನಾ, ದ್ವಿತೀಯ ಸ್ಥಾನ ಪಡೆದ ರಾಜೇಶ್ವರಿ ಹಾಗೂ ತೃತೀಯ ಸ್ಥಾನ ಪಡೆದ ಗಾದಿಲಿಂಗಪ್ಪ ಹಾಗೂ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶಾರದಾದೇವಿ, ದ್ವಿತೀಯ ಸ್ಥಾನ ಪಡೆದ ಉಮಾದೇವಿ ಹಾಗೂ ತೃತೀಯ ಸ್ಥಾನ ಪಡೆದ ಕಲ್ಪನಾ ಅವರಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net