ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತಲಿ: ಪ್ರೊ.ಪಿ.ಕಣ್ಣನ್

mysore
Published on

ಮೈಸೂರು: ಶಿಕ್ಷಕರು ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತಿ, ಮೂಢನಂಬಿಕೆಗಳನ್ನು ಹೋಗಲಾಡಿಸಬೇಕು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಪ್ರೊ.ಪಿ.ಕಣ್ಣನ್ ತಿಳಿಸಿದರು.


ಶಿಕ್ಷಕರ ದಿನಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಮುಕ್ತ ವಿವಿಯಿಂದ ಕಾವೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


ಶಿಕ್ಷಕರು ಸಮಾಜಮುಖಿ ಚಿಂತನೆ ಮಾಡಬೇಕು. ಇದರೊಂದಿಗೆ ಮಕ್ಕಳ ಮನಸ್ಸನ್ನು ಅಧ್ಯಯನ ಮಾಡಿ, ಅವರ ಶೈಲಿಯಲ್ಲೇ ಬೋಧನೆ ಮಾಡಬೇಕು. ಇದರಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಬಾಂಧವ್ಯ ಉತ್ತಮವಾಗಿರಲಿದೆ. ಜತೆಗೆ, ಮಕ್ಕಳಲ್ಲಿರುವ ಮೂಢನಂಬಿಕೆ ತೊಲಗಿಸಿ, ವೈಚಾರಿಕ, ವೈಜ್ಞಾನಿಕ ಮನೋಭಾವ ಮೂಡಿಸಬೇಕು. ಜ್ಞಾನದ ಶಕ್ತಿಗಳಾಗಿ ಮಕ್ಕಳನ್ನು ಬೆಳೆಸಬೇಕು ಎಂದು ಹೇಳಿದರು.


ಕುಲಪತಿ ಪ್ರೊ. ಶರಣಪ್ಪ ವಿ.ಹಲಸೆ, ಕುಲಸಚಿವರಾದ ಪ್ರೊ.ಕೆ.ಬಿ.ಪ್ರವೀಣ, ಡಾ.ಎಚ್.ವಿಶ್ವನಾಥ್, ಡೀನ್‌ಗಳಾದ ಪ್ರೊ.ಎನ್.ಲಕ್ಷ್ಮೀ, ಪ್ರೊ.ಎಂ.ರಾಮನಾಥಂ ನಾಯ್ಡು, ಹಣಕಾಸು ಅಧಿಕಾರಿ ಎಚ್.ವಿ.ಶ್ವೇತಾ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net