ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಲಿ

7 vpt 1
Published on


ಕೊಡಗು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಶಾಸಕ ಎ.ಎಸ್.ಪೊನ್ನಣ್ಣ ಸಲಹೆ ನೀಡಿದರು.
ಇತ್ತೀಚೆಗೆ ಬಿಳುಗುಂದ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಲೋಕ ಸಭಾ ಚುನಾವಣೆ ಸಮೀಪಿಸುತ್ತಿದೆ. ಕಾರ್ಯಕರ್ತರು ವೈಷಮ್ಯ ಮರೆತು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.


ಕಾರ್ಯಕ್ರಮದಲ್ಲಿ ಬಿಳುಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಮೀರಾ, ಪಕ್ಷದ ಮುಖಂಡರಾದ ಪಟ್ಟಡ ರಂಜಿ ಪೂಣಚ್ಚ, ಕೋಳಮಂಡ ರಫೀಕ್, ಪೊನ್ನಕ್ಕಿ , ಉಮ್ಮರ್ ಫರೋಖ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net