ಮಕ್ಕಳ ಸರ್ವಾಂಗೀಣ ಪ್ರಗತಿ ಧ್ಯೇಯವಾಗಲಿ

5Athani1A
Published on

ಅಥಣಿ: ಪಟ್ಟಣದಲ್ಲಿ ಗುರುಭವನ ನಿರ್ಮಾಣಕ್ಕೆ ಸರ್ಕಾರದಿಂದ ೫೦ ಲಕ್ಷ ರೂ. ಅನುದಾನ ಮಂಜೂರಾಗಿದೆ. ಸೂಕ್ತ ಸ್ಥಳ ಗುರುತಿಸಿ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಪಟ್ಟಣದ ಗಚ್ಚಿನಮಠದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಲ್ಲಿ ಮಾತನಾಡಿ, ಸರ್ಕಾರ ಕ್ಷೇತ್ರದಲ್ಲಿ ೯ ಪ್ರೌಢಶಾಲೆ ಮಂಜೂರು ಮಾಡಿದೆ. ಹೊಸದಾಗಿ ೧೧ ಆಂಗ್ಲಮಾಧ್ಯಮ ಸರ್ಕಾರಿ ಶಾಲೆ ಆರಂಭಿಸಲು ಅನುಮತಿ ದೊರೆತಿದೆ. ಶಿಕ್ಷಕರು ಮಕ್ಕಳ ಸರ್ವಾಂಗೀಣ ಪ್ರಗತಿಗೆ ಶ್ರಮಿಸಬೇಕು ಎಂದರು.

ಗಚ್ಚಿನಮಠದ ಶಿವಬಸವ ಸ್ವಾಮೀಜಿ ಆಶೀರ್ವಚನ ನೀಡಿ, ಮಕ್ಕಳಿಗೆ ಅಕ್ಷರಜ್ಞಾನ ನೀಡಿ ದೇಶದ ಸಂಪತ್ತನ್ನಾಗಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.

ಸದಲಗಾ ಸರ್ಕಾರಿ ಕಾಲೇಜು ಉಪನ್ಯಾಸಕ ವೀರೇಶ ಪಾಟೀಲ ಮಾತನಾಡಿದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ್ತ ಶಿಕ್ಷಕರಿಗೆ, ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು.

ತಹಸೀಲ್ದಾರ್ ಸಿದರಾಯ ಭೋಸಗಿ, ಬಿಇಒ ಎಂ.ಆರ್.ಮುಂಜೆ, ತಾಪಂ ಇಒ ಶಿವಾನಂದ ಕಲ್ಲಾಪುರ, ಸಿಡಿಪಿಒ ಮಂಜುನಾಥ ಸೌಂದಲೆಗೆಕರ, ಪುರಸಭೆ ಅಧ್ಯಕ್ಷೆ ಶಿವಲೀಲಾ ಬುಟಾಳೆ, ಉಪಾಧ್ಯಕ್ಷೆ ಭುವನೇಶ್ವರಿ ಯಂಕಚ್ಚಿ, ಜಿ.ಎನ್.ಖೋತ, ಜಿ.ಎಂ.ಹಿರೇಮಠ, ಎಂ.ವಿ.ನಾಮದಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net