ಜನವಿರೋಧಿ ಕಾಂಗ್ರೆಸ್ ಸರ್ಕಾರ ತೊಲಗಲಿ, ಬಿಜೆಪಿ ಕಾರ್ಯಕರ್ತರ ಆಕ್ರೋಶ

BJP PROTEST DC OFFICE
ವಿಜಯಪುರ ಜಿಲ್ಲಾಡಳಿತ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಸಂಸದ ರಮೇಶ ಜಿಗಜಿಣಗಿ ನೇತೃತ್ವ ಪ್ರತಿಭಟನೆ ನಡೆಸಿದರು. ಆರ್.ಎಸ್. ಪಾಟೀಲ ಕೂಚಬಾಳ, ಚಂದ್ರಶೇಖರ ಕವಟಗಿ, ವಿಜುಗೌಡ ಪಾಟೀಲ ಮತ್ತಿತರರಿದ್ದಾರೆ.
Published on

ವಿಜಯಪುರ: ರಾಜ್ಯ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ ಹಾಗೂ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಡಳಿತ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಜಿಲ್ಲಾಡಳಿತ ಕಚೇರಿಗೆ ಆಗಮಿಸಲಾಗಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸಿದ್ದರಿಂದ ಆಕ್ರೋಶ ಹೊರಹಾಕಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿಗೆ ಮನವಿ ಸಲ್ಲಿಸಿದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಬೆಂಗಳೂರಿನ ಅಂಬಿಕಾಪತಿ ಅವರ ಮನೆಯಲ್ಲಿ ಕೋಟಿ ಕೋಟಿ ರೂ. ಹಣ ಪತ್ತೆಯಾಗಿದೆ, ಇದು ಕೇವಲ ಒಂದು ಉದಾಹರಣೆ ಅಷ್ಟೇ, ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗೆ ಕಾಂಗ್ರೆಸ್ ಸರ್ಕಾರ ಕೋಟಿ ಕೋಟಿ ಕಮೀಷನ್ ಪಡೆಯುತ್ತಿರುವುದು ಸ್ಪಷ್ಟವಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ವಿದ್ಯುತ್ ಕ್ಷಾಮ ಎದುರಾಗಿದ್ದು, ರೈತರ ಜಮೀನುಗಳಿಗೆ ನೀರುಣಿಸಲಾಗುತ್ತಿಲ್ಲ. ಇನ್ನೊಂದೆಡೆ ವಿದ್ಯುತ್ ಬಿಲ್ ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಹೀಗಾಗಿ ಜನ ಆಕ್ರೋಶಗೊಂಡಿದ್ದಾರಲ್ಲದೇ ರಾಜ್ಯ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ಆಡಳಿತ ನಡೆಸಲು ಸಂಪೂರ್ಣ ವಿಫಲವಾಗಿದ್ದು ಕೂಡಲೇ ಮುಖ್ಯಮಂತ್ರಿ ಹಾಗೂ ಎಲ್ಲ ಸಚಿವ ಸಂಪುಟ ಸದಸ್ಯರು ರಾಜಿನಾಮೆ ನೀಡಿ ಮನೆಗೆ ಹೋಗಬೇಕು ಎಂದು ಒತ್ತಾಯಿಸಿದರು.

ಪಾಲಿಕೆ ಸದಸ್ಯ ಮಳುಗೌಡ ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ಜನತೆಯನ್ನು ಕಗ್ಗತ್ತಲಲ್ಲಿ ಮುಳುಗಿಸಿದೆ. ಇಡೀ ವ್ಯವಸ್ಥೆಯನ್ನೇ ಹಾಳು ಮಾಡಿದೆ ಎಂದು ಕಿಡಿಕಾರಿದರು.

ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಮಹಾನಗರ ಪಾಲಿಕೆ ಸದಸ್ಯ ರಾಜು ಕುರಿ, ಪ್ರಕಾಶ ಅಕ್ಕಲಕೋಟ, ವಿಜುಗೌಡ ಪಾಟೀಲ, ಬಸವರಾಜ ಬಿರಾದಾರ, ಶಿವರುದ್ರ ಬಾಗಲಕೊಟ, ಮಲ್ಲಿಕಾರ್ಜುನ ಜೋಗುರ, ಉಮೇಶ ಕಾರಜೋಳ, ಸುರೇಶ ಬಿರಾದಾರ, ಭೀಮಾಶಂಕರ ಹದನೂರ, ಸಂಜಯಪಾಟೀಲ ಕನಮಡಿ, ಅಶೋಕ ಅಲ್ಲಾಪೂರ, ಬಾಬುರಾಜೇಂದ್ರ ನಾಯಕ, ಮಹೇಂದ್ರ ನಾಯಕ, ಗೋಪಾಲ ಘಟಕಾಂಬಳೆ, ರಾಜು ಮಗಿಮಠ, ಮಲ್ಲಮ್ಮ ಜೋಗೂರ, ಛಾಯಾ ಮಸಿಯವರ, ಲಕ್ಷ್ಮಿ ಕನ್ನೊಳ್ಳಿ, ಪ್ರೇಮಾನಂದ ಬಿರಾದಾರ, ಜವಾರ ಗೋಸಾವಿ, ವಿಠ್ಠಲ ಹೊಸಪೇಠ, ಬಸವರಾಜ ಬೈಚಬಾಳ, ಕೃಷ್ಣಾ ಗುನ್ಹಾಳಕರ, ವಿಜಯ ಜೋಶಿ, ಸಂದೀಪ ಪಾಟೀಲ, ರಾಜೇಶ ತವಸೆ, ವಿಕಾಶ ಪದಕಿ, ಕಾಂತು ಶಿಂಧೆ, ಶಂಕರ ಹೂಗಾರ, ಅಬ್ದುಲ್ ಸತ್ತಾರ, ವಿನಾಯಕ ದಹಿಂಡೆ, ಶರಣಬಸು ಕುಂಬಾರ, ಮಡಿವಾಳ ಯಾಳವಾರ, ಆನಂದ ಮುಚ್ಚಂಡಿ, ಸಂತೋಷ ನಿಂಬರಗಿ, ಸಂಪತ್ ಕೋಹಳ್ಳಿ, ರವಿ ಚವಾಣ್, ಸಚಿನ ಬೊಂಬಳೆ, ಸೋಮು ಮಠ, ವಿಜಯ ಬಿರಾದಾರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net