ಕ್ರೀಡಾಪಟುಗಳು ಸಂಯಮದಿಂದ ವರ್ತಿಸಲಿ

hnd 29-1 cricket
ಹುನಗುಂದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯ ಚಾಲನಾ ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಎ. ಮೂಲಿಮನಿ ಮಾತನಾಡಿದರು. ಹಿರಿಯ ದಿವಾಣಿ ನ್ಯಾಯಾಧೀಶ ಹಣಮಂತರಾವ್ ಕುಲಕರ್ಣಿ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಬಸವರಾಜ ನೇಸರ್ಗಿ ಇದ್ದರು.
Published on

ಹುನಗುಂದ: ದೈಹಿಕ ಮತ್ತು ಮಾನಸಿಕ ಸಮತೋಲನದ ಆರೋಗ್ಯ ಹೊಂದಲು ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಟ್ಟಣದ ಸಂಚಾರಿ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾದೀಶ ಜಿ. ಎ. ಮೂಲಿಮನಿ ಹೇಳಿದರು.

ವಕೀಲರ ದಿನಾಚರಣೆ ಅಂಗವಾಗಿ ಹುನಗುಂದ ಮತ್ತು ಇಳಕಲ್ಲ ವಕೀಲರ ಸಂಘ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿರುವ ಟೆನ್ನಿಸ್‌ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಆಟದಲ್ಲಿ ಕ್ರೀಡಾಪಟುಗಳು ಸಂಯಮದಿಂದ ವರ್ತಿಸಬೇಕು ಎಂದರು.

ಹುನಗುಂದ ವಕೀಲರ ಸಂಘದ ಅಧ್ಯಕ್ಷ ಪಿ.ಎಸ್. ಕಠಾಣಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ. ಕ್ರೀಡಾಪಟುಗಳು ಕ್ರೀಡಾಮನೋಭಾವದಿಂದ ಆಟವಾಡಬೇಕು ಎಂದರು.

ಕರ್ನಾಟಕ ರಾಜ್ಯ ವಕೀಲ ಸದಸ್ಯ ಎಸ್. ಎಸ್. ಮಿಟ್ಟಲಕೋಡ ಮಾತನಾಡಿದರು.

ಹಿರಿಯ ದಿವಾಣಿ ನ್ಯಾಯಾಧೀಶ ಹಣಮಂತರಾವ್ ಕುಲಕರ್ಣಿ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಬಸವರಾಜ ನೇಸರ್ಗಿ, ಇಳಕಲ್ಲ ವಕೀಲರ ಸಂಘದ ಅಧ್ಯಕ್ಷ ಬಿ.ಎ. ಆವಟಿ, ತಾಪಂ ಇಒ ಮುರಳೀಧರ ದೇಶಪಾಂಡೆ, ಸಿಪಿಐ ಸುನಿಲ್ ಸವದಿ, ತಾಲೂಕು ಆರೋಗ್ಯ ಅಧಿಕಾರಿ ಡಾ. ಸಂಗಮೇಶ ಅಂಗಡಿ, ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ, ಗ್ರೇಡ್-2 ತಹಸೀಲ್ದಾರ್ ಮಹೇಶ ಸಂದೀಗೌಡ, ಹಿರಿಯ ಪತ್ರಕರ್ತ ಅಮರೇಶ ನಾಗೂರ, ನಗರದ ಹೆಸ್ಕಾಂನ ಸಹಾಯಕ ಲೆಕ್ಕಾಧಿಕಾರಿ ಮಹಮ್ಮದ ಅಲಿ ಕಂಟ್ರಾಕ್ಟರ್, ವಕೀಲರ ಸಂಘದ ಪದಾಧಿಕಾರಿಗಳಾದ ಎಸ್.ಎಂ. ಉಪ್ಪಾರ, ಎಂ. ಎ. ಸಂಗಮಕರ, ಎಂ. ಆರ್. ಮಾರೇನಕೊಳ್ಳ, ವಿ. ಬಿ. ದಮ್ಮೂರಮಠ, ಆರ್. ಬಾಬು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net