ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ

22dvk 10
Published on

ಬೆಳಗಾವಿ: ಕೃಷಿ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ ರಾಜ್​ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಒಗ್ಗಟ್ಟಿನಿಂದ ಹೆಚ್ಚು ಯೋಜನೆಗಳ ಲಾಭ ರೈತರಿಗೆ ದೊರಕಿಸುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಹುಲ್​ ಶಿಂಧೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಮಂಗಳವಾರ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಹಾಗೂ ಅನುಮೋದನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಸಾಲಿನಲ್ಲಿ ಹೈಟೆಕ್​ ಹಾರ್ವೆಸ್ಟರ್​ ಹಬ್​ ಯೋಜನೆ ಜಿಲ್ಲೆಯಲ್ಲಿ ಗುರಿಗಿಂತ ಹೆಚ್ಚು ಸಾಧನೆ ಮಾಡಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ರಾಷ್ಟೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ತರಬೇತಿ ಮತ್ತು ಮಾರ್ಗದರ್ಶನ ಮೂಲಕ ರಾಸಾಯನಿಕ ಮುಕ್ತ ಕೃಷಿಗೆ ಒತ್ತು ನೀಡಿ ಸುರತ ಆಹಾರ ಉತ್ಪಾದನೆ ಮತ್ತು ಭೂಮಿಯ ಫಲವತ್ತತೆ ಹೆಚ್ಚಿಸಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.

ಅವರು ಎಲ್ಲ ಕೃಷಿ ಹೊಂಡಗಳ ಸುತ್ತಲೂ ಕಡ್ಡಾಯವಾಗಿ ತಂತಿ ಬೇಲಿ ನಿರ್ಮಿಸಿ ಜನ ಮತ್ತು ಜಾನುವಾರುಗಳ ಸುರಕ್ಷತೆ ವಹಿಸಲು ಅರಿವು ಮೂಡಿಸುವ ಭಿತ್ತಿಪತ್ರ ಬಿಡುಗಡೆಗೊಳಿಸಿದರು. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಶಂಕರಗೌಡ ಪಾಟೀಲ, ಕೃಷಿ ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಬಂಧಿತ ಸಂಸ್ಥೆಗಳ ಮುಖ್ಯಸ್ಥರು, ಪ್ರಗತಿಪರ ರೈತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net