

ಮೂಡಲಗಿ: ಸರ್ಕಾರಿ ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಜತೆಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಬೆಳಗಾವಿ ಲೋಕಾಯುಕ್ತ ಡಿವೈಎಸ್ಪಿ
ಎನ್.ಪುಷ್ಪಲತಾ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರ ಮನವಿಯನ್ನು ಪರಿಶೀಲಿಸಿ ಕಾನೂನು ವ್ಯಾಪ್ತಿಯಲ್ಲಿ ಆದಷ್ಟು ಬೇಗ ಪರಿಹಾರ ಒದಗಿಸಬೇಕು. ಸಾರ್ವಜನಿಕರ ಸೇವೆ ದೇವರ ಸೇವೆಗೆ ಸಮನಾಗಿದ್ದು, ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸಬೇಕು ಎಂದರು.
ಜಮೀನು ವಿವಾದ, ಕಾಲುವೆಗಳ ತಕರಾರು, ಗ್ರಾಮ ಆಡಳಿತ ಅಧಿಕಾರಿಯಿಂದ ವಾರಸಾದಲ್ಲಿ ಕೈಬಿಟ್ಟ ಪ್ರಕರಣಗಳು, ಶಾಲಾ ನಿವೇಶನ ಅತಿಕ್ರಮಣ, ಉಪನೋಂದಣಾಧಿಕಾರಿ ಕಚೇರಿ ಭ್ರಷ್ಟಾಚಾರ ಪ್ರಕರಣಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.ತಹಸೀಲ್ದಾರ್ ಶ್ರೀಶೈಲ ಗುಡಮೆ, ತಾಪಂ ಎಇಒ ಎ್.ಜಿ.ಚಿನ್ನನವರ ಸಿಡಿಪಿಒ ಯಲ್ಲಪ್ಪ ಗದಾಡಿ, ಹೆಸ್ಕಾಂ ಅಧಿಕಾರಿ ಎಂ.ಎಸ್.ನಾಗನ್ನವರ, ಸಿಪಿಐ ಶ್ರೀಶೈಲ ಬ್ಯಾಕೂಡ, ಮುಖ್ಯಾಧಿಕಾರಿ ತುಕಾರಾಮ ಮಾದರ, ಪ್ರಭಾರ ಶಿಕ್ಷಣಾಧಿಕಾರಿ ರೇಣುಕಾ ಆಣಿ ಇದ್ದರು.