ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲಿ

26Manju11
ಬೆಳಗಾವಿ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿದರು. ಮೊಹಮ್ಮದ್ ರೋಷನ್, ರಾಹುಲ ಶಿಂಧೆ, ದಿನೇಶಕುಮಾರ ಮೀನಾ, ಡಾ.ಭೀಮಾಶಂಕರ ಗುಳೇದ ಇತರರಿದ್ದರು.
Published on

ಬೆಳಗಾವಿ: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಉದ್ಭವಿಸಬಹುದಾದ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಲ್ಲ ಇಲಾಖಾ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದಾಗಿ ಉಂಟಾಗುವ ಪ್ರವಾಹ ಸ್ಥಿತಿ ನಿಭಾಯಿಸುವ ನಿಟ್ಟಿನಲ್ಲಿ ತಹಸೀಲ್ದಾರರು ತಮ್ಮ ವ್ಯಾಪ್ತಿಯ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಮಳೆಯಿಂದಾಗಿ ಹಿಡಕಲ್ ಶೇ. 90, ನವೀಲುತೀರ್ಥ ಶೇ. 67.46 ಭರ್ತಿ ಆಗಿದೆ. ಪ್ರವಾಹಕ್ಕೆ ಒಳಗಾಗುವ ಗ್ರಾಮ ಹಾಗೂ ತಾಲೂಕುಗಳಲ್ಲಿ ಟಾಸ್‌‌ಟೆೆರ್ಸ್ ರಚಿಸಲಾಗಿದೆ. ಜೂನ್ 1ರಿಂದ ಇಲ್ಲಿಯವರೆಗೆ ಒಟ್ಟು 5 ಮಾನವ ಜೀವ ಹಾನಿಯಾಗಿದ್ದು ಮಾರ್ಗಸೂಚಿಗಳನ್ವಯ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಜಿಪಂ ಸಿಇಒ ರಾಹುಲ ಶಿಂಧೆ ಮಾತನಾಡಿ, ನಿರಂತರ ಮಳೆಯಿಂದಾಗಿ ಬಾಣಂತಿಯರ ಮನೆಗೆ ಪಡಿತರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇಲ್ಲಿಯವರೆಗೆ 650 ಬಾಣಂತಿಯರ ಮನೆಗೆ ಪಡಿತರ ವಿತರಿಸಾಲಗಿರುತ್ತದೆ. ಸಂಚಾರಿ ವಾಹನ ಘಟಕದ ಮೂಲಕ ಪಶುಗಳಿಗೆ ರೈತರ ಮನೆ ಬಾಗಿಲಿಗೆ ಹೋಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ನಗರ ಪೊಲೀಸ್ ಆಯುಕ್ತ ಇಡಾ ಮಾರ್ಟಿನ ಮಾರ್ಬನ್ಯಾಂಗ್, ಎಸ್‌ಪಿ ಡಾ.ಭೀಮಾಶಂಕರ ಗುಳೇದ, ಪ್ರೋಬೆಷನರಿ ಐಎಎಸ್ ಅಧಿಕಾರಿ ದಿನೇಶಕುಮಾರ ಮೀನಾ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net