ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಲಿ

Let the benefits reach even the last person.
ಲೋಕಾಪುರ ಹೋಬಳಿಮಟ್ಟದ ಪಿಂಚಣಿ ಅದಾಲತ್ ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ, ಕಂದಾಯ ನಿರೀಕ್ಷಕ ಸತೀಶ ಬೇವೂರ ನೇತೃತ್ವದಲ್ಲಿ ಜರುಗಿತು.
Published on

ಲೋಕಾಪುರ: ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಏರ್ಪಡಿಸುವ ಪಿಂಚಣಿ ಅದಾಲತ್, ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ ಸೌಲಭ್ಯ ಸದುಪಯೋಗ ಪಡೆಯುವಂತೆ ಉಪತಹಸೀಲ್ದಾರ್ ಬಿ.ಎಸ್. ರಂಗಣ್ಣವರ ಹೇಳಿದರು.

ಸ್ಥಳೀಯ ನಾಡಕಚೇರಿ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಲೋಕಾಪುರ ಹೋಬಳಿ ಮಟ್ಟದ ಪಿಂಚಣಿ ಅದಾಲತ್‌ನಲ್ಲಿ ಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ತಲುಪಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಿ ಯೋಜನೆಗಳ ಸಾಕಾರಕ್ಕೆ ಮುಂದಾಗಬೇಕು. ಕಂದಾಯ ಇಲಾಖೆಯಿಂದ ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ ವೇತನ ಮುಂತಾದ ಹಲವು ಪಿಂಚಣಿ ಯೋಜನೆ ಅರ್ಹರಿಗೆ ತಲುಪಿಸಬೇಕು ಎಂದರು.

ಕಂದಾಯ ನಿರೀಕ್ಷಕ ಸತೀಶ ಬೇವೂರ ಮಾತನಾಡಿ, ಈಗಾಗಲೇ ಪ್ರಮಾಣ ಪತ್ರಗಳು ಇದ್ದರೂ ಮಾಸಾಶನ ನಿಂತು ಹೋಗಿದ್ದರೆ ಗಮನಕ್ಕೆ ತನ್ನಿ, ಪಿತ್ರಾರ್ಜಿತ ಜಮೀನು ವರ್ಗಾವಣೆಯಾಗಬೇಕಾದರೆ ಪೋತಿ ಮಾಡಿಸಿಕೊಳ್ಳಬೇಕು, ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನಿಮಗೆ ಪ್ರಮಾಣ ಪತ್ರ ನೀಡಲಾಗುವುದು, ಸರ್ಕಾರದ ಆದೇಶದನ್ವಯ ತಿಂಗಳಿಗೊಮ್ಮೆ ಕೇಂದ್ರ ಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ ಎಂದರು.

ಕಂದಾಯ ಇಲಾಖೆ ಸಿಬ್ಬಂದಿ ಗ್ರಾಮ ಆಡಳಿತಾಧಿಕಾರಿ ಪ್ರಕಾಶ ಶೇರಖಾನೆ ರೇಷ್ಮಾ ಜಮಾದಾರ್, ವಲಯದ ಎಲ್ಲ ಗ್ರಾಮಡಳಿತಾಧಿಕಾರಿಗಳು, ಗ್ರಾಮ ಸಹಾಯಕರು, ಲಾನುಭವಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net