ಬಿಜೆಪಿ ಬಲಿಷ್ಠವಾಗಿಸಲು ಶ್ರಮಿಸಲಿ

web1
ರಾಯಬಾಗ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಲೋಕಸಭೆ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಶಾಸಕ ಅಭಯ ಪಾಟೀಲ ಮಾತನಾಡಿದರು. ಶಾಸಕ ಡಿ.ಎಂ.ಐಹೊಳೆ, ಮಹೇಶ ಕುಮಠಳ್ಳಿ, ಸತೀಶ ಅಪ್ಪಾಜಿಗೋಳ ಇತರರಿದ್ದರು.
Published on

ರಾಯಬಾಗ: ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸಬೇಕು ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ಪಟ್ಟಣದ ಶಾಸಕ ಗೃಹಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚಿಕ್ಕೋಡಿ ಮತಕ್ಷೇತ್ರದ ಲೋಕಸಭೆ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ, ಪಕ್ಷವನ್ನು ತಳಮಟ್ಟದಿಂದ ಬಲಿಷ್ಠವಾಗಿ ಕಟ್ಟಲು ಕಾರ್ಯಕರ್ತರು ಶ್ರಮಿಸಬೇಕು ಎಂದರು. ಶಾಸಕ ಡಿ.ಎಂ.ಐಹೊಳೆ ಮಾತನಾಡಿ, ಪಕ್ಷದ ಕಾರ್ಯಕರ್ತರು ಮನಸ್ತಾಪ ಬದಿಗೊತ್ತಿ, ಅಭ್ಯರ್ಥಿ ಗೆಲುವಿಗಾಗಿ ಕೆಲಸ ಮಾಡಬೇಕು ಎಂದರು.

ಮಾಜಿ ಶಾಸಕ ಮಹೇಶ ಕುಮಠಳ್ಳಿ, ಡಾ.ರಾಜೇಶ ನೇರ್ಲಿ ಮಾತನಾಡಿದರು. ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ಸಿಬಿಕೆಎಸ್‌ಎಸ್‌ಕೆ ಉಪಾಧ್ಯಕ್ಷ ತಾತ್ಯಾಸಾಬ ಕಾಟೆ, ನಿರ್ದೇಶಕ ಭರತೇಶ ಬನವಣೆ, ರಾಯಬಾಗ ಮಂಡಲ ಅಧ್ಯಕ್ಷ ಬಸವರಾಜ ಡೊಣವಾಡೆ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೆಮಲಾಪುರೆ, ರಾಜಶೇಖರ ಖನದಾಳೆ, ಮಹಾದೇವ ಬೊರಗಾಂವೆ, ರಾಮಚಂದ್ರ ಕಾಟೆ, ಶ್ರೀಧರ ಕುಡಚೆ, ಪೃಥ್ವಿರಾಜ ಜಾಧವ, ಅಮಿತ ಜಾಧವ, ವಿ.ಎಸ್.ಪೂಜಾರಿ, ಮಲ್ಲಪ್ಪ ಮೈಶಾಳೆ, ಅಪ್ಪಾಸಾಬ ಬ್ಯಾಕೂಡೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net