ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಲಿ

Meeting of BLOs,
ಇಳಕಲ್ಲ ನಗರದ ಕಿತ್ತೂರು ರಾಣಿ ಚನ್ನಮ್ಮ ಉದ್ಯಾನದಲ್ಲಿ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಸಸಿ ನೆಟ್ಟು ನೀರುಣಿಸಿ ‘ನನ್ನ ದೇಶ ನನ್ನ ಮಣ್ಣು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧಿಕಾರಿ ನಿಂಗಪ್ಪ ಬಿರಾದಾರ, ಶ್ರೀನಿವಾಸ ಜಾಧವ, ನವೀನ ಬಲಕುಂದಿ, ಮಹಾಂತೇಶ ಕಲ್ಮಠ ಇತರರಿದ್ದರು.
Published on

ಇಳಕಲ್ಲ(ಗ್ರಾ): ಬಿಎಲ್‌ಒಗಳು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮತದಾರರ ಕುರಿತು ಪರಿಶೀಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಸೂಚಿಸಿದರು.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ನಡೆದ ಬಿಎಲ್‌ಒಗಳ ಸಭೆಯಲ್ಲಿ ಅವರು ಮಾತನಾಡಿದರು.
ತಹಸೀಲ್ದಾರ್ ನಿಂಗಪ್ಪ ಬಿರಾದಾರ, ಕಂದಾಯ ನಿರೀಕ್ಷಕ ನವೀನ ಬಲಕುಂದಿ, ಗ್ರಾಮ ಲೆಕ್ಕಾಧಿಕಾರಿ ಮಹಾಂತೇಶ ಕಲ್ಮಠ, ನಗರಸಭೆ ಪೌರಾಯುಕ್ತ ಶ್ರೀನಿವಾಸ ಜಾಧವ ಹಾಗೂ ಸಿಬ್ಬಂದಿ ಇದ್ದರು.
ಜಿಲ್ಲಾಧಿಕಾರಿ ಅವರು ನಗರಸಭೆಯ ಆಡಳಿತಾಧಿಕಾರಿಯೂ ಆಗಿದ್ದು ಇದೇ ಸಮಯದಲ್ಲಿ ನಗರಸಭೆಯ ಕಿತ್ತೂರು ಚನ್ನಮ್ಮ ಉದ್ಯಾನದಲ್ಲಿ ಸಸಿ ನೆಟ್ಟು ನನ್ನ ದೇಶ ನನ್ನ ಮಣ್ಣು ಯೋಜನೆಗೆ ಚಾಲನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net