

ವಿಜಯವಾಣಿ ಸುದ್ದಿಜಾಲ ಧಾರವಾಡ
ಉತ್ತರ ಕರ್ನಾಟಕ ಭಾಗದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಪ್ರಸಕ್ತ ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ ನೀಡಿ ವಿಶೇಷ ಕೊಡುಗೆಗಳನ್ನು ಘೋಷಿಸಬೇಕು ಎಂದು ಕರ್ನಾಟಕ ರೈತ ಸೇನೆ ಅಧ್ಯಕ್ಷ ಶಂಕರ ಅಂಬಲಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಸಂಕಷ್ಟಗಳಿಗೆ ಸ್ಪಂದಿಸಿ ರೈತ ವಿರೋದಿ ಮಸೂದೆಗಳನ್ನು ರದ್ದುಪಡಿಸಬೇಕು. ರೈತರ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ಬೆಂಬಲ ಬೆಲೆ ನಿಗದಿಪಡಿಸಬೇಕು. ಬಜೆಟ್‌ನಲ್ಲಿ ಮಹಾದಾಯಿ, ಕಳಸಾ- ಬಂಡೂರಿ ಯೋಜನೆ ಜಾರಿಗೆ ಅಗತ್ಯ ಅನುದಾನ ನೀಡಬೇಕು ಎಂದರು.
ಸಾಮಾಜಿಕ ಹೋರಾಟಗಾರ ಲಕ್ಷ ್ಮಣ ಬಕ್ಕಾಯಿ ಮಾತನಾಡಿ, ರಾಜ್ಯದ ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತಪರ ಯೋಜನೆಗಳನ್ನು ಘೋಷಿಸಬೇಕು. ಅವುಗಳ ಅನುಷ್ಠಾನಕ್ಕೆ ಅಗತ್ಯ ಅನುದಾನ ನೀಡಬೇಕು ಎಂದರು.