ಕೇಂದ್ರ ಸರ್ಕಾರ ಕಾಯ್ದೆ ವಾಪಸ್ ಪಡೆಯಲಿ

ಕೇಂದ್ರ ಸರ್ಕಾರ ಕಾಯ್ದೆ ವಾಪಸ್ ಪಡೆಯಲಿ
Published on

ಹನೂರು: ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ವಾಹನ ಚಾಲಕರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚು ದಂಡದ ಕಾನೂನು ರೂಪಿಸಿರುವುದನ್ನು ಖಂಡಿಸಿ ಬುಧವಾರ ತಾಲೂಕಿನ ರಾಮಾಪುರದಲ್ಲಿ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಚಾಲಕರಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 7 ಲಕ್ಷ ರೂ. ದಂಡ ವಿಧಿಸಬಹುದೆಂದು ಕೇಂದ್ರ ಸರ್ಕಾರ ಹೊಸದಾಗಿ ರೂಪಿಸಿರುವ ನಿಯಮ ಚಾಲಕರಿಗೆ ಮಾರಕವಾಗಿದ್ದು, ಆತಂಕಕ್ಕೆ ಶುರುವಾಗಿದೆ. ಇದರಿಂದ ತುಂಬ ತೊಂದರೆಯಾಗಲಿದೆ. ಆದ್ದರಿಂದ ಸರ್ಕಾರ ಈ ಬಗ್ಗೆ ಮನಗಂಡು ನಿಯಮವನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಸ್. ಬಾಲರಾಜು, ರಾಜ್ಯ ಬಿಜೆಪಿ ಒಬಿಸಿ ಕಾರ್ಯಕಾರಿಣಿ ಸದಸ್ಯ ಜನದನಿ ಬಿ.ವೆಂಕಟೇಶ್, ಮಾಲೀಕರು, ಚಾಲಕರು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net