ಮಕ್ಕಳು ದುಶ್ಚಟ ತ್ಯಜಿಸಿ ಉತ್ತಮ ಜೀವನ ರೂಪಿಸಿಕೊಳ್ಳಲಿ

DHAGRA
Published on

ಮುಂಡರಗಿ: ಮಕ್ಕಳು ದುಶ್ಚಟಗಳಿಗೆ ದಾಸರಾಗದೇ ಉತ್ತಮ ಶಿಕ್ಷಣ ಪಡೆದು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು. ಸುತ್ತಲಿನ ವಾತಾವರಣದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಅಧಿಕಾರಿ ವಿಶಾಲಾ ಮಲ್ಲಾಪುರ ಹೇಳಿದರು.

ಪಟ್ಟಣದ ವಿ.ಜಿ. ಲಿಂಬಿಕಾಯಿ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಶುಕ್ರವಾರ ಜರುಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯ ಎ.ಕೆ. ಮುಲ್ಲಾನವರ, ಮಕ್ಕಳು ಮಾದಕ ವಸ್ತುಗಳನ್ನು ಬಳಸದೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.

ವಿ.ಜಿ. ಲಿಂಬಿಕಾಯಿ ಪ್ರೌಢಶಾಲೆ ಸಮಿತಿಯ ಗೌರವ ಕಾರ್ಯದರ್ಶಿ ಕೊಟ್ರೇಶ ಅಂಗಡಿ ಉದ್ಘಾಟಿಸಿದರು. ಮುಖ್ಯಶಿಕ್ಷಕ ಸಿ.ವಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಎಂ.ವಿ. ಗೊಂಡಬಾಳ ಇತರರು ಇದ್ದರು. ಶಿಕ್ಷಕಿ ಸವಿತಾ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ನೇತ್ರಾವತಿ, ಸೇವಾ ಪ್ರತಿನಿಧಿ ಚನ್ನಮ್ಮ ನಿರೂಪಿಸಿದರು. ಶಂಕರ ಕಲ್ಲಕುಟಗರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net