

ಕೆ.ಎಂ.ದೊಡ್ಡಿ : ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ವ್ಯಕ್ತಿಗಳನ್ನು ಸ್ಮರಿಸ ಬೇಕು ಎಂದು ಭಾರತೀಯ ಸೇನೆಯ ನಿವೃತ್ತ ಸುಬೇದಾರ್ ಮೇಜರ್ ಉದಯ್‌ಕುಮಾರ್ ತಿಳಿಸಿದರು.
ಇಲ್ಲಿನ ಭಾರತಿ ವಿದ್ಯಾ ಸಂಸ್ಥೆ ಗುರುವಾರ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಅವರು, ಸ್ವಾತಂತ್ರೃ ಬರಲು ಕಾರಣರದವರ ಮೌಲ್ಯಗಳನ್ನು ಅಳವಡಿಸಿಕೊಂಡು ನಾವೂ ನಮ್ಮ ಕೈಲಾದಷ್ಟು ದೇಶ ಸೇವೆ ಮಾಡುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.
ನೆಲ, ಜಲ, ಭಾಷೆ, ಗಡಿ ಇತ್ಯಾದಿಗಳನ್ನು ಕುರಿತಂತೆ ಎಚ್ಚರ ವಹಿಸುವ ಅಗತ್ಯವಿದ್ದು ಸತ್ಪ್ರಜೆಗಳಾಗಿ ರೂಪುಗೊಳ್ಳುವ ಶಿಕ್ಷಣ ವ್ಯವಸ್ಥೆಯ ಅಗತ್ಯವಿದೆ ಎಂದರು.
ಬಿಇಟಿ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ಮಾತನಾಡಿ, ಪ್ರತಿಯೊಬ್ಬ ವಿದ್ಯಾಥಿಗಳು ಪ್ರಾಥಮಿಕ ಹಂತದಲ್ಲೇ ದೇಶಾಭಿಮಾನ ಬೆಳೆಸಿಕೊಳ್ಳುವ ಮೂಲಕ ದೇಶದ ಪ್ರಗತಿಗೆ ಸಹಕರಿಸಿ ಎಂದರು.
ಮಾಜಿ ಸಂಸದ ದಿವಂಗತ ಜಿ.ಮಾದೇಗೌಡ ಅವರು ಗಾಂಧಿ ತತ್ವಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿ ಕೊಂಡು ಶೈಕ್ಷಣಿಕ ಪ್ರಗತಿಗೆ ದುಡಿದ ಮುತ್ಸದ್ದಿಯಾಗಿದ್ದು, ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ವಿವಿಧ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಈ ವೇಳೆ ಭಾರತೀ ಎಜುಕೇಷನ್ ಟ್ರಸ್ಟ್‌ನ ಅಂಗ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಮಹದೇವಸ್ವಾಮಿ, ಪ್ರೊ.ಎಸ್.ನಾಗರಾಜು, ಡಾ.ಚಂದನ್, ಡಾ. ತಮಿಜ್‌ಮಣಿ, ಡಾ.ಎಸ್.ಎಲ್.ಸುರೇಶ್, ಜಿ.ಕೃಷ್ಣ, ಡಾ.ಬಾಲಸುಬ್ರಮಣ್ಯಂ, ಮಂಜು ಜೇಕಬ್, ಡಾ.ಶಾಂತಕುಮಾರ್, ಪಲ್ಲವಿ, ಪಿ.ರಾಜೇಂದ್ರರಾಜೇ ಅರಸ್, ಪ್ರತಿಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.