ಬಂಜಾರ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಲಿ: ಶಾರದಾ ಪರ‍್ಯಾನಾಯ್ಕ್

3 smg 2
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಾರದಾ ಪೂರ್ಯನಾಯ್ಕ, ಟಿ.ನಾನ್ಯಾನಾಯ್ಕ್, ಯೋಗೇಶ್, ಟಿ. ಗಣೇಶ್ ನಾಯ್ಕ್, ಕೆ.ಶಶಿಕುಮಾರ್, ರಂಜಿತಾ ಇದ್ದರು.
Published on

ಶಿವಮೊಗ್ಗ: ಬಂಜಾರ ಸಮಾಜ ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ಶೈಕ್ಷಣಿಕವಾಗಿ ಇನ್ನೂ ಹೆಚ್ಚು ಜಾಗೃತವಾಗಬೇಕಿದೆ. ಆ ನಿಟ್ಟಿನಲ್ಲಿ ಸಮಾಜದವರು ಒಗ್ಗೂಡಬೇಕು ಎಂದು ಶಾಸಕಿ ಶಾರದಾ ಪರ‍್ಯಾನಾಯ್ಕ್ ಹೇಳಿದರು.

ನಗರದ ಬಂಜಾರ ಕನ್ವೆನ್ಶನ್ ಹಾಲ್‌ನಲ್ಲಿ ಭಾನುವಾರ ತಾಲೂಕು ಬಂಜಾರ ಸಂಘ, ಜಿ¯್ಲÁ ಗೋರ್ ಬಾಯಿ ಪತ್ತಿನ ಸಹಕಾರ ಸಂಘ, ತಾಲೂಕು ಮಹಿಳಾ ಬಂಜಾರ ಸಂಘ, ಗೋರ್ ಸಿಕ್ವಾಡಿ ಸಾಮಾಜಿಕ ಚಳವಳಿ ಆಶ್ರಯದಲ್ಲಿ ೨೧ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶೇಷವಾಗಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಮಾಜದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಿದೆ. ಹಾಗಾಗಿ ಸಮಾಜದ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಪಾಲಕರು ಕಾರ್ಯಪ್ರವೃತ್ತರಾಗಬೇಕು ಎಂದರು.
ಬಹುಳಷ್ಟು ಸಮಾಜಗಳು ಈಗಾಗಲೇ ತಮ್ಮ ಸಮಾಜದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಕಂಕಣತೊಟ್ಟಿವೆ. ತಮ್ಮ ತಮ್ಮ ಸಮಾಜದ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಆದರೆ ಬಂಜಾರ ಸಮಾಜ ಇಂತಹ ಕಾರ್ಯಗಳಿಂದ ಹಿಂದುಳಿದಿದ್ದು ಮುಂದಿನ ದಿನಗಳಲ್ಲಿ ನಮ್ಮ ಸಮಾಜದ ವಿದ್ಯಾರ್ಥಿಗಳಿಗೂ ಇಂತಹ ತರಬೇತಿ ಹಾಗೂ ಮಾರ್ಗದರ್ಶನ ನೀಡಬೇಕಿದೆ ಎಂದರು.
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಗುರುತಿಸಿ ಪುರಸ್ಕರಿಸುವುದರಿಂದ ಅವರಿಗೆ ಇನ್ನಷ್ಟು ಪ್ರೋತ್ಸಾಹ ನೀಡಿದಂತಾಗುತ್ತದೆ. ಗ್ರಾಮಾಂತರ ಪ್ರದೇಶದಲ್ಲಿಯೂ ಉತ್ತಮ ಶಾಲಾ ಕಾಲೇಜುಗಳು ನಿರ್ಮಾಣವಾಗಿವೆ. ನಗರಕ್ಕೆ ಬಂದು ಹೋಗಲು ಬಸ್ ವ್ಯವಸ್ಥೆಯೂ ಕಲ್ಪಿಸಲಾಗಿದೆ. ಇದರಿಂದ ಮಕ್ಕಳನ್ನು ಕೆಲಸಕ್ಕೆ ಹಚ್ಚಿಸದೆ ಉತ್ತಮ ಶಿಕ್ಷಣ ಕೊಡಿಸುವಂತೆ ಪಾಲಕರಿಗೆ ಸಲಹೆ ನೀಡಿದರು.
ತಾಲೂಕು ಬಂಜಾರ ಸಂಘದ ಗೌರವಾಧ್ಯಕ್ಷ ಕೆ.ಶಶಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ,20 ವರ್ಷಗಳಿಂದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಸಮಾಜದ ಮಕ್ಕಳು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗೆ ಹೋಗಲು ಸಂಘದ ವ್ಯಾಪ್ತಿಯಲ್ಲಿ ನೆರವು ನೀಡಲಾಗುತ್ತಿದೆ. ಮಕ್ಕಳಿಗೆ ಪ್ರೋತ್ಸಾಹ ನೀಡುವುದು ಸಂಘದ ಹೆಮ್ಮೆಯಾಗಿದೆ ಎಂದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ತಾಲೂಕು ಸಂಘದ ಅಧ್ಯಕ್ಷ ಟಿ.ನಾನ್ಯಾನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಯೋಗೇಶ್, ಸಿಕ್ವಾಡಿ ಸಾಮಾಜಿಕ ಚಳವಳಿಯ ದಕ್ಷಿಣ ಕರ್ನಾಟಕ ಸಂಯೋಜಕ ಟಿ. ಗಣೇಶ್ ನಾಯ್ಕ್, ತಾಲೂಕು ಬಂಜಾರ ಮಹಿಳಾ ಸಂಘದ ಅಧ್ಯಕ್ಷೆ ರಂಜಿತಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net