ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲಿ

ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಲಿ
Published on

ಸೋಮವಾರಪೇಟೆ: ತಾಲೂಕು ಮೊಗೇರ ಸೇವಾ ಸಮಾಜದ ವತಿಯಿಂದ ಪಟ್ಟಣದ ಪತ್ರಿಕಾ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮುದಾಯದ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಮೊಗೇರ ಸೇವಾ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪಿ.ಕೆ. ಚಂದ್ರು ಮಾತನಾಡಿ, ಮೊಗೇರ ಸಮಾಜದ ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು. ಪಾಲಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ಕರೆ ನೀಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಜನಾರ್ದನ್ ಮಾತನಾಡಿ, ಮೊಗೇರ ಸಮಾಜದ ವತಿಯಿಂದ ಸಮುದಾಯದ ಅಭಿವೃದ್ಧಿಗೆ ಹಲವಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಸಮುದಾಯದವರು ಸಂಘಟಿತರಾದಲ್ಲಿ ಮಾತ್ರ ಎಲ್ಲ ರೀತಿಯ ಸವಲತ್ತು ಪಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ಸಂಘವನ್ನು ಇನ್ನಷ್ಟು ಬಲಪಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಎಂ. ದಾಮೋಧರ್, ಕಾರ್ಯದರ್ಶಿ ಹರೀಶ್, ತಾಲೂಕು ಅಧ್ಯಕ್ಷ ವಸಂತ್, ಕಾರ್ಯದರ್ಶಿ ಕೆ.ಕೆ. ಗಣೇಶ್, ಉಪಾಧ್ಯಕ್ಷ ಹರೀಶ್, ಖಜಾಂಚಿ ಜಯಪ್ರಕಾಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net