

ಹಿರೇಕೆರೂರ: ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಹೊರ ಹಾಕಲು ಆಯೋಜಿಸಲಾಗುವ ಪ್ರತಿಭಾ ಕಾರಂಜಿಗಳಲ್ಲಿ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಶ್ರೀಧರ ಹೇಳಿದರು.
ತಾಲೂಕಿನ ಚಿಕ್ಕಮತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕೋಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಉತ್ತಮವಾದ ಪ್ರತಿಭೆ ಅಡಗಿರುತ್ತದೆ ಅದನ್ನು ಗುರುತಿಸಿ, ಪ್ರೋತ್ಸಾಹಿಸಿ ಸೂಕ್ತ ವೇದಿಕೆಯಲ್ಲಿ ಅವಕಾಶ ಕಲ್ಪಿಸುವ ಕಾರ್ಯ ಮಾಡಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಶಿಲ್ಪಾ ತುಮರಿಕೊಪ್ಪ, ಉಪಾಧ್ಯಕ್ಷ ಬಸವರಾಜ ತಿಪ್ಪಣ್ಣನವರ, ಎಸ್ಡಿಎಂಸಿ ಅಧ್ಯಕ್ಷ ಚಿದಂಬರ ಕಮ್ಮಾರ, ಕ್ಷೇತ್ರ ಸಮನ್ವಯ ಅಧಿಕಾರಿ ಎನ್. ಸುರೇಶಕುಮಾರ, ಪ್ರಧಾನಮಂತ್ರಿ ಪೋಷಣ ಅಭಿಯಾನದ ಸಹಾಯಕ ನಿರ್ದೇಶಕ ಎಚ್.ಎಚ್. ಜಾಡರ, ಕೋಡ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಹನುಮಗೌಡ ಕೆಂಚನಗೌಡ್ರ, ರೂಪಾ ಡೊಂಬರ, ಶೋಭಾ ಜಗದೀಶ ಬಣಕಾರ, ಇತರರಿದ್ದರು. ರಮೇಶ ಪೂಜಾರ ಹಾಗೂ ಗೀತಾ ಮರಳಪ್ಪನವರ ಕಾರ್ಯಕ್ರಮ ನಿರ್ವಹಿಸಿದರು.