ಮಿಶ್ರೀಕೋಟಿ ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡಲಿ

3-KLG 11A
Published on

ಕಲಘಟಗಿ: ತಾಲೂಕಿನ ಮಿಶ್ರೀಕೋಟಿ ಗ್ರಾಮದ ಸಿಇಎಸ್​ಎಸ್​ಜೆ ಪದವಿಪೂರ್ವ ಕಾಲೇಜಿನ ಎನ್​ಎಸ್​ಎಸ್ ಘಟಕದ ವತಿಯಿಂದ ಕೇಂದ್ರ ಸರ್ಕಾರದ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಕಾಲೇಜು ಆವರಣ ಹಾಗೂ ಜಾಡಗೇರಿ ಓಣಿಯಲ್ಲಿ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛತೆ ಮಾಡಿದರು.

ಎನ್​ಎಸ್​ಎಸ್ ಕಾರ್ಯಕ್ರಮಾಧಿಕಾರಿ ಪಿ.ಟಿ. ಲಮಾಣಿ ಮಾತನಾಡಿ, ಗ್ರಾಮಗಳ ಸ್ವಚ್ಛತೆಯನ್ನು ಪ್ರತಿ ವಾರ ಶ್ರಮದಾನದ ಮೂಲಕ ವಿದ್ಯಾರ್ಥಿಗಳು ಮಾಡಬೇಕು ಎಂದರು.

ಪ್ರಾಚಾರ್ಯ ಎಸ್.ಎಂ. ಮರಲಿಂಗಣ್ಣವರ ಮಾತನಾಡಿ, ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರೂ ಸೇವಾ ಮನೋಭಾವ ರೂಢಿಸಿಕೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳು ತಮ್ಮ ಗ್ರಾಮಗಳ ಸ್ವಚ್ಛತೆಗೆ ಸಂಘಗಳನ್ನು ಕಟ್ಟಿಕೊಂಡು ಪ್ರತಿ ತಿಂಗಳಿಗೊಮ್ಮೆ ಸ್ವಚ್ಛತಾ ಕಾರ್ಯ ಮಾಡಬೇಕು ಎಂದರು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಕಾಲೇಜ್ ವಿಭಾಗದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net