

ಕೋಲಾರ: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಸಿಎಂ ವಿರುದ್ಧ ತನಿಖೆಗೆ ನೀಡಿದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ಸಿದ್ದರಾಮಯ್ಯ ಅವರು ನೈತಿಕತೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ, ಬಿಜೆಪಿ ಕಾರ್ಯಕರ್ತರು ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಎಸ್.ಬಿ.ಮುನಿವೆಂಕಟಪ್ಪ ಮಾತನಾಡಿ, ಸಿದ್ದರಾಮಯ್ಯ ಅವರು ತಮ್ಮ ಮೇಲೆ ಕಪು$್ಪ ಚುಕ್ಕೆ ಇಲ್ಲ ಎಂದು ವಾದ ಮಾಡುತ್ತಿದ್ದರು. ಆದರೇ ಈಗ ಮುಡಾ ಪ್ರಕರಣದ ತನಿಖೆಗೆ ಅನುಮತಿ ನೀಡಿದ್ದು, ಇದಕ್ಕೆ ಸಾ ಇನ್ನೇನು ಬೇಕು?, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಎಸ್ಐಟಿಯು ರಾಜ್ಯ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಯಾಗಿದ್ದು, ಸಾಕ್ಷ$್ಯಗಳನ್ನು ನಾಶಪಡಿಸುವ ಸಾಧ್ಯತೆಯಿದೆ. ಇದರಿಂದಾಗಿ ಪ್ರಕರಣದ ತನಿಖೆಯನ್ನು
ಸಿಬಿಐಗೆ ಒಪ್ಪಿಸಬೇಕು ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಸೇರಿ ಸಚಿವ ಸಂಪುಟದ ಸಚಿವರ ವಿರುದ್ಧ ಒಂದಲ್ಲ ಒಂದು ರೀತಿ ಆರೋಪಗಳು ಕೇಳಿ ಬರುತ್ತಿವೆ. ಇದನ್ನು ಬಿಜೆಪಿಯು ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿಕೊಂಡು ಬಂದಿದೆ. ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ತಿಳಿಸಿದರು.
ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿಲ್ಲ ಎಂದು ಸಿಎಂ ಸೇರಿ ಸಚಿವರು ಹೇಳಿಕೆ ನೀಡಿದ್ದರು, ತನಿಖೆ ನಡೆದು ಸತ್ಯಾಸತ್ಯತೆ ಹೊರ ಬರುತ್ತಿದ್ದಂತೆ ಹಗರಣ ಆಗಿರುವ ಬಗ್ಗೆ ಒಪ್ಪಿಕೊಂಡರು. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದಿಕ್ಕು ದೋಚದಂತ ಪರಿಸ್ಥಿತಿಯಲ್ಲಿ ಸರ್ಕಾರದ ಇದೆ. ಇದರಿಂದಾಗಿ ಹಗರಣಗಳ ಮೇಲೆ ಹಗರಣಗಳಿಗೆ ಕೈ ಹಾಕಿದೆ. ಆದರೆ ಬಿಜೆಪಿಯವರ ಮೇಲೆ ಬೊಟ್ಟು ಮಾಡಿ ತೋರಿಸುತ್ತಿದೆ. ಇದರಿಂದಾಗಿ ಯಾರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬುದು ಜನತೆಗೆ ತಿಳಿದಿದೆ ಎಂದು ಹೇಳಿದರು. ಬಿಜೆಪಿಯಿಂದ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ, ಸಿಎಂ ರಾಜೀನಾಮೆ ನೀಡದಿದ್ದರೆ ರಾಜ್ಯದ್ಯಂತ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಓಂಶಕ್ತಿ ಚಲಪತಿ, ಮಹಿಳಾ ಮೋರ್ಚಾ ಅಧ್ಯೆ ಅರುಣ, ಕಾರ್ಯಕಾರಿ ಸಮಿತಿ ಸದಸ್ಯೆ ಮಮತಾ, ಮುಖಂಡರಾದ ಲಕ್ಷಿ$್ಮನಾರಾಯಣ ಇದ್ದರು.
ಅಧಿಕಾರದಲ್ಲಿದ್ದರೆ ಸಾಕ್ಷ$್ಯ ನಾಶಪಡಿಸುವ ಸಾಧ್ಯತೆ
ಕೋಲಾರ: ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರೆದರೆ ಸಾಕ್ಷ$್ಯಗಳನ್ನು ನಾಶಪಡಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕು. ಆ ಮೂಲಕ ತನಿಖೆಗೆ ಸಹಕರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ, ದೂರಿನ ಮೇರೆಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಏಕಾಏಕಿಯಾಗಿ ಏನು ಅನುಮತಿ ನೀಡಿಲ್ಲ, ದೂರಿನ ಆಧಾರದ ಮೇರೆಗೆ ಸಾಕಷ್ಟು ಚರ್ಚೆ ಮಾಡಿ ತನಿಖೆಗೆ ಅನುಮತಿ ನೀಡಿದ್ದಾರೆ. ಅಷ್ಟು ಮಾತ್ರಕ್ಕೆ ಶಿೆಯಾಗಬೇಕಾಗಿಲ್ಲ. ಸಿದ್ದರಾಮಯ್ಯ ಅವರು ಪದ್ಧತಿ ಇಟ್ಟುಕೊಂಡು ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಪ್ರಕರಣವನ್ನು ಸಿಬಿಐಗೆ ಒಪ್ಪಿಸಿದರೆ ಸತ್ಯ ಹೊರಬರುತ್ತದೆ ಎಂದರು. ಎಸ್ಐಟಿಗೆ ಒಪ್ಪಿಸಿರುವ ವಾಲ್ಮೀಕಿ ಹಗರಣದಲ್ಲಿ ಯಾರಿಗೂ ಶಿೆಯಾಗಿಲ್ಲ. ಮುಡಾ ಹಗರಣವು ಹೊಸದೇನಲ್ಲ ಎಂದರು.