ಸುಪ್ರೀಂ ತೀರ್ಪು ಬರುವವರಿಗೂ ಸಿಎಂ ಕಾಯಲಿ

ramadas ex minister hits congress guarantee scheems koppl
RAMADASA
Published on

ಮೈಸೂರು: ಕೇಂದ್ರದಿಂದ ಅನುದಾನ ಬಿಡುಗಡೆ ವಿಚಾರವಾಗಿ ನ್ಯಾಯಾಲಯದ ಮೊರೆ ಹೋಗಿರುವ ಸಿದ್ದರಾಮಯ್ಯ ತೀರ್ಪು ಬರುವವರೆಗೆ ಕಾಯಲಿ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಟಾಂಗ್ ನೀಡಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಸಿದ್ದರಾಮಯ್ಯ ಮಾಡಿರುವ ಟೀಕೆಗೆ ತಿರುಗೇಟು ನೀಡಿದ ಅವರು, ಕೇಂದ್ರದ ಅನುದಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಏನು ತೀರ್ಪು ಬರುತ್ತದೆ ಎಂದು ಕಾದು ನೋಡೋಣ. ನ್ಯಾಯಾಲಯದ ಮೊರೆ ಹೋಗಿರುವ ಸಿದ್ದರಾಮಯ್ಯ ಕೇಂದ್ರ ಸಚಿವ ಅಮಿತ್ ಷಾ ವಿರುದ್ಧ ಆರೋಪ ಮಾಡುತ್ತಿರುವುದು ಸರಿಯಲ್ಲ. ನ್ಯಾಯಾಲಯದ ಆದೇಶ ಬರುವವರೆಗೂ ಕಾಯಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net