

ಸಂಶಿ: ಸಾಂಪ್ರದಾಯಿಕ ಹಬ್ಬ ಆಚರಣೆ ಕುರಿತು ವಿದ್ಯಾರ್ಥಿಗಳು ವಿಶೇಷ ಆಸಕ್ತಿ ವಹಿಸಿ ನಮ್ಮ ಸಂಸ್ಕೃತಿ ಬಿಂಬಿಸುವ ಮೂಲಕ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬಾಳಬೇಕು ಎಂದು ಕೆಎಲ್ಇ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಎ.ಬಿ. ಉಪ್ಪಿನ ಹೇಳಿದರು.
ಗ್ರಾಮದ ಕೆಎಲ್ಇ ಸಂಸ್ಥೆಯ ಮಹಾವಿದ್ಯಾಲಯದಲ್ಲಿ ಬಿಕಾಂ ಪದವಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಜಾನಪದ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚಾರ್ಯ ಪೊ. ರಮೇಶ ಅತ್ತಿಗೇರಿ, ಎಂ.ಸಿ. ಅಂಗಡಿ, ಆರ್.ಜಿ. ಮಣಕಟ್ಟಿ, ಎನ್.ಬಿ. ಹೊಳಗಣ್ಣವರ, ಇತರರು ಉಪಸ್ಥಿತರಿದ್ದರು. ಜಾನಪದ ನೃತ್ಯ, ಹಾಡುಗಳ ಸ್ಪರ್ಧೆ ನಡೆದವು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.